ಶಾಲೆಯ ಕೊಠಡಿಯಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿತ, 5 ವಿದ್ಯಾರ್ಥಿಗಳಿಗೆ ಗಂಭೀರ ಗಾಯ | ಜನತಾ ನ್ಯೂಸ್
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ನಗರದ ನಿರ್ಮಲ ಕಾನ್ವೆಂಟ್ ಶಾಲೆಯ ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಾಲ್ಕನೇ ತರಗತಿ ಕೊಠಡಿಯಲ್ಲಿ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟರಿಂಗ್ ಕುಸಿದು ಐದು ಜನ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಅಂಕೋಲದ ತಹಶೀಲ್ದಾರ್ ಹಾಗೂ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :The collapse of the roof of the building in the school room, serious injury to 5 students