ಪಂಜಾಬ್ ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು: ಜಗದೀಶ್ ಶೆಟ್ಟರ್ | ಜನತಾ ನ್ಯೂಸ್
ಬೆಂಗಳೂರು : ಕರ್ನಾಟಕದಲ್ಲೊಬ್ಬ ಸಿದ್ಧು, ಪಂಜಾಬ್ ನಲ್ಲೊಬ್ಬ ಸಿಧು. ಪಂಜಾಬ್ ನಲ್ಲಿ ನವಜೋತ್ ಸಿಂಗ್ ಸಿಧುನಿಂದ ಕಾಂಗ್ರೆಸ್ ನಾಶ, ರಾಜ್ಯದಲ್ಲಿ ಸಿದ್ಧರಾಮಯ್ಯ ಅವರಿಂದ ಕಾಂಗ್ರೆಸ್ ನಾಶ. ಅಂತೂ ಇಂತೂ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಕಾಲದಲ್ಲಿ ಕಾಂಗ್ರೆಸ್ ನಾಶವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪಂಚ ರಾಜ್ಯಗಳ ಫಲಿತಾಂಶ ಬಗ್ಗೆ ಮಾತನಾಡಿದ ಅವರು, ನಾವು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ಚುನಾವಣಾ ಸಮೀಕ್ಷೆ ಕೂಡ ನಿಜವಾಗಿದೆ. ಉತ್ತರಾಖಂಡ್ನಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ. ಬಿಜೆಪಿ ಗೆಲುವುಗೆ ಮತ ನೀಡಿದಂತ ಮತದಾರರಿಗೆ, ಶ್ರಮಿಸಿದಂತ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದರು. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ಹಾಗೂ ಭಾರತದ ಭವಿಷ್ಯಕ್ಕೆ ಪೂರಕವಾಗಲಿದೆ ಎಂದರು.
ಒಂದೇ ಕುಟುಂಬದ ಮೇಲೆ ಅವಲಂಬಿತವಾಗಿರುವುದರಿಂದ ಪಕ್ಷ ನಾಶವಾಗಲಿದೆ. ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತವಾದ ಪಕ್ಷ ಅಲ್ಲ. ಇದು ಕಾರ್ಯಕರ್ತರ ಪಕ್ಷ. ಪ್ರತಿಯೊಂದು ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ, ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ ಎಂದರು.