ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಿಂದ ಅಪಕ್ಷ ಸ್ಥಾನಕ್ಕೆ ಕಳುಹಿಸುತ್ತಾರೆ: ಸಿ.ಟಿ ರವಿ | ಜನತಾ ನ್ಯೂಸ್

10 Mar 2022
535

ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಗಮನಹರಿಸಿದ್ದೀರಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಜನ ಕಾಂಗ್ರೆಸ್‍ನ್ನು ವಿಪಕ್ಷ ನಾಯಕ ಸ್ಥಾನದಿಂದ ಅಪಕ್ಷ ಸ್ಥಾನಕ್ಕೆ ಕಳುಹಿಸುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಗೋವಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಫಲಿತಾಂಶದಲ್ಲಿ ಬಿಜೆಪಿಯ ಸಾಧನೆ ಸಮಾಧಾನ ತಂದಿದೆ. ಗೋವಾದಲ್ಲಿ ಸ್ಥಿರ ಸರ್ಕಾರ ಕೊಟ್ಟಿದ್ದೆವು, ಒಳ್ಳೆಯ ಅಭಿವೃದ್ಧಿ ಕಾರ್ಯಗಳೂ ಆಗಿದ್ದವು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಭಾರತೀಯ ಜನರು ಪಾರ್ಟಿ, ಪ್ರಮೋದ್ ಸಾವಂತ್ ಎಲ್ಲಾ ಒಟ್ಟುಗೂಡಿ ಸಂಘಟಿತ ಪ್ರಯತ್ನ ಮಾಡಿದ್ದೆವು. ಆ ಪ್ರಯತ್ನಕ್ಕೆ ಜನ ಆಶೀರ್ವದಿಸಿದ್ದಾರೆ.

ದೇವೇಂದ್ರ ಫಡ್ನವಿಸ್ ಮತ್ತು ನಮ್ಮ ತಂಡ ಸಮನ್ವಯದಿಂದ ತಳಮಟ್ಟದಿಂದ ಕೆಲಸ ಮಾಡಿದ್ದೆವು. ಅದರ ಪರಿಣಾಮ ಒಳ್ಳೆಯ ಫಲಿತಾಂಶ ನಿರೀಕ್ಷೆಯಂತೆ ಜನರು ಕೊಟ್ಟಿದ್ದಾರೆ. ಗೋವಾ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ.‌ಇದಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೂ ಧನ್ಯವಾದ ಹೇಳುತ್ತೇನೆ ಎಂದರು.

ಮುಂದಿನ ವರ್ಷ ಕರ್ನಾಟಕದ ಜನತೆಯೂ ಕಾಂಗ್ರೆಸ್‍ಗೆ ಪಾಠ ಕಲಿಸುತ್ತದೆ. ಸದ್ಯ ಗೋವಾ ಜನತೆ ಖಾಲಿ ಕೈನಲ್ಲಿ ಕಳುಹಿಸಿದೆ ಮುಂದೆ ಕರ್ನಾಟಕದ ಜನತೆ ಖಾಲಿ ಕೈನಲ್ಲಿ ಕಳುಹಿಸುತ್ತಾರೆ. ಪರಿಶ್ರಮದಿಂದ ಕೆಲಸ ಮಾಡಿದರೆ ಗೆಲುವು ಸಿಗುತ್ತದೆ ಎಂಬುದಕ್ಕೆ ಇದೇ ಉದಾಹರಣೆ. 4 ರಾಜ್ಯದಲ್ಲಿ ಅಧಿಕಾರ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED TOPICS:
English summary :Goa elections: As BJP nears win, CT Ravi says Shiv Sena to face same fate in Maharashtra

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...