ಮರಕ್ಕೆ ಕಾರು ಡಿಕ್ಕಿ, ಭೀಕರ ಅಪಘಾತ, ಸ್ಥಳದಲ್ಲೇ ಐವರ ಸಾವು | ಜನತಾ ನ್ಯೂಸ್
ಕಲಬುರಗಿ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದೆ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಳಾಗಿದ್ದರೆ. ಕಾರು ಚಾಲಕನಿಗೆ ನಿದ್ರೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
RELATED TOPICS:
English summary :Accident in Kalburgi