ಭೀಕರ ರಸ್ತೆ ಅಪಘಾತ : ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ | JANATA NEWS
ಹುಬ್ಬಳ್ಳಿ : ಚಾಲಕನ ನಿಯಂತ್ರ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಬಳಿ ನಡೆದಿದೆ.
ಕಾರು ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೋಗುತ್ತಿದ್ದ ವೇಳೆ ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವೃತ್ತ ಬಳಿಯ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮತ್ತು ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಿನ ಜಾವ ನಡೆದಿದೆ.
ಅಪಘಾತದಲ್ಲಿ ದೊಡ್ಡಬಳ್ಳಾಪುರ ಚಾಲಕ ರಂಜಿತ ಮತ್ತು ಪ್ರಯಾಣಿಕ ರಾಕೇಶ ಮೃತಪಟ್ಟಿದ್ದಾರೆ. ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.