Thu,May16,2024
ಕನ್ನಡ / English

60 ಮೆಡಿಕಲ್ ಕಾಲೇಜುಗಳಲ್ಲಿ ಉಕ್ರೇನ್ ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ವ್ಯಾಸಂಗ ಮುಂದುವರಿಸುವಂತೆ ಕ್ರಮ | JANATA NEWS

21 Mar 2022
2872

ಬೆಂಗಳೂರು : ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಉಕ್ರೇನ್ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸುಧಾಕರ್, ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದೇವೆ.

ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳು ಇವೆ. ತಕ್ಷಣಕ್ಕೆ ಅದೇ ಕಾಲೇಜುಗಳಲ್ಲಿ ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳು ಕಲಿಕೆ ಮುಂದುವರಿಸಬಹುದು. ವಿದ್ಯಾರ್ಥಿಗಳು ಇರುವ ಜಿಲ್ಲೆಗಳಲ್ಲೇ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಮೊದಲ ವರ್ಷದಿಂದ ಆರಂಭವಾಗಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಈ ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರಿಸುವಂತೆ ಕ್ರಮ ವಹಿಸುವಂತೆ ತೀರ್ಮಾನಿಸಲಾಗಿದೆ.

ಒಂದು ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ರಚನೆಯಾಗಿದೆ. ಉಕ್ರೇನ್‌ನಿಂದ ವಾಪಸ್ ಆಗಿರುವ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಏನೇನು ಕ್ರಮಗಳನ್ನು ಕೈಗೊಳ್ಳಬಹುದು ಎಂದು ಸಮಿತಿ ವರದಿ ನೀಡಲಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಸಮಿತಿ ವರದಿ ಕೊಡಲಿದೆ. ಇದನ್ನ ನಾವು ಕೇಂದ್ರಕ್ಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.

RELATED TOPICS:
English summary :Steps to continue studying for students returning from Ukraine in 60 medical colleges

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...