ಬೆಂಗಳೂರಿನಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಯೆಲ್ಲೊ ಅಲರ್ಟ್ | JANATA NEWS

ಬೆಂಗಳೂರು : ಬೆಂಗಳೂರಿನಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ ಸುರಿಯಲಿದ್ದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಬಂಗಾಲಕೊಲ್ಲಿಯಲ್ಲಿನ "ಅಸನಿ" ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಶುಕ್ರವಾರದಿಂದ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 22 ರಿಂದ 24ರ ತನಕ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
RELATED TOPICS:
English summary :Heavy rain in Bangalore for 48 hours: Yellow Alert from Meteorological Department