ಮೇಕೆದಾಟು ವಿವಾದ: ತಮಿಳುನಾಡು ಸರ್ಕಾರಕ್ಕೆ ನಾಳೆ ರಾಜ್ಯದಿಂದ ಕೌಂಟರ್ | JANATA NEWS

22 Mar 2022
477

ಬೆಂಗಳೂರು : ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ‌ ಅಂಗೀಕರಿಸಿದ ನಿರ್ಣಯ ಖಂಡಿಸಿ ಪ್ರತಿ ನಿರ್ಣಯ ಮಾಡಲು ರಾಜ್ಯ ಸರ್ಕಾರ ರೆಡಿಯಾಗಿದೆ. ನಾಳೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯ ಖಂಡಿಸಿ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗುವುದು. ತಮಿಳುನಾಡು ನಿರ್ಣಯ ಕಾನೂನು ಬಾಹಿರ. ನಮ್ಮ ಈ ನಿಲುವು ಸ್ಪಷ್ಟವಾಗಿದೆ. ಬುಧವಾರ ನಿರ್ಣಯ ತರುತ್ತೇವೆ, ಮೇಕೆದಾಟು ಯೋಜನೆಗಾಗಿ ತಮಿಳುನಾಡಿಗೆ ಸೂಕ್ತ ಪ್ರತ್ಯುತ್ತರ ನೀಡಲು ನಾಳೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ಪ್ರದೇಶದಲ್ಲಿ, ನಮ್ಮ ನೀರಿನಲ್ಲಿ ನಾವು ಈ ಯೋಜನೆ ಮಾಡಲು ಹೊರಟಿದ್ದೇವೆ. ಇದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಟ್ರಿಬ್ಯುನಲ್ ಆದೇಶ ಎಲ್ಲೂ ಉಲ್ಲಂಘನೆ ಆಗಲ್ಲ ಎಂದರು. ತಮಿಳುನಾಡಿಗೆ ಹೋಗುವ ಹೆಚ್ಚುವರಿ ನೀರನ್ನ ಬಳಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇಷ್ಟಾದರೂ ಯೋಜನೆಗೆ ಅಡ್ಡಗಾಲು ಹಾಕುವ ಪ್ರಯತ್ನ ನಡೆಯುತ್ತಿದೆ

ಎರಡನೇ ಹಂತದ ಯೋಜನೆ ಮಾತಾಡ್ತಿದೆ. ಇದನ್ನು ನಾವು ಪ್ರಶ್ನಿಸಿದ್ದೇವೆ. ನಮಗೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕ್ತಿದೆ ಎಂದರು. ಹಿಂದೆ ಹೀಗೆ ಕಾವೇರಿ ಯೋಜನೆಗೆ ಅಡ್ಡಿ ಮಾಡಿದ್ರು. ಆಗ ಅವರು ಹೊಗೇನಕಲ್ ಪ್ರಪೋಸ್ ಮಾಡಿದಾಗ ನಾವು ಕಾವೇರಿ ಯೋಜನೆ ಪ್ರಪೋಸ್ ಮಾಡಿದಾಗ ಅದು ಇತ್ಯರ್ಥ ಆಗಿತ್ತು ಎಂದು ಹೇಳಿದರು.

ನಾವು ಕಾವೇರಿ ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

RELATED TOPICS:
English summary :Mekedatu dispute: CM Bommai Ready To Give Counter To Tamil Nadu Government

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...