ಪತಿಯ ಕೊಲೆಗೆ 10 ಲಕ್ಷ ರೂ.ಗೆ ಸುಪಾರಿ ನೀಡಿದ್ದ ಪತ್ನಿ! | JANATA NEWS

23 Mar 2022
460

ಬೆಳಗಾವಿ : ತನ್ನ ಪತಿಯನ್ನು ಕೊಲ್ಲಲು ಎರಡನೇ ಪತ್ನಿ ಸುಪಾರಿ ನೀಡಿದ್ದ ಘಟನೆ ಬೆಳಗಾವಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾರ್ಚ್​ 15ರಂದು ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ನಡೆದಿದ್ದ ಉದ್ಯಮಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ರಾಜು ದೊಡ್ಡಬೊಮ್ಮನವರ್ (41) ಕೊಲೆಯಾದ ಉದ್ಯಮಿ. ಮಂಡೋಳಿ ರಸ್ತಯಲ್ಲಿ ಕಣ್ಣಿಗೆ ಕಾರದ ಪುಡಿ ಎರಚಿ ಚಾಕು ಇರಿದು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಇದೀಗ ಪ್ರಮುಖ ಮೂರು ಆರೋಪಿಗಳು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧ ಶಶಿಕಾಂತ್ ಶಂಕರಗೌಡ, ಧರ್ಮೇಂದ್ರ ಘಂಟಿ ಹಾಗೂ ಎರಡನೇ ಪತ್ನಿ ಕಿರಣ ದೊಡ್ಡಬೊಮ್ಮನವರ್ (26) ಎಂದು ಗುರುತಿಸಲಾಗಿದೆ.

ಮೊದಲ ಮದುವೆಯನ್ನು ಮುಚ್ಚಿಟ್ಟು ಕಿರಣ ಜತಗೆ ಕೊಲೆಯಾದ ರಾಜು ಎರಡನೇ ವಿವಾಹವಾಗಿದ್ದ. ವಿವಾಹವಾಗಿ ಎರಡು ಮಕ್ಕಳಾದ ಬಳಿಕ ರಾಜು ಮೂರನೇ ವಿವಾಹವಾಗಿದ್ದ. ತನ್ನ ಹಾಗೂ ತನ್ನ ಇಬ್ಬರ ಮಕ್ಕಳ ಹೆಸರಲ್ಲಿ ಆಸ್ತಿ ಮಾಡುವಂತೆ ರಾಜುಗೆ ಕಿರಣಾ ಒತ್ತಾಯಿಸಿದ್ದಳು. ಆದರೆ ಎರಡನೇ ಹೆಂಡತಿ ಹೆಸರಲ್ಲಿ ಯಾವುದೇ ಆಸ್ತಿ ಮಾಡಿರಲಿಲ್ಲ.

ರಾಜು, ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಅಪಾರ್ಟ್​ಮೆಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದರು. ಉದ್ಯಮದಲ್ಲಿ ಬಂದಂತಹ ಲಾಭವನ್ನು ಹೆಂಡತಿಗೆ ಹಾಗೂ ಪಾಲುದಾರರ ಜತೆ ರಾಜು ಹಂಚಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ.

ಹೀಗಾಗಿ ಪತಿಯ ಬ್ಯುಸಿನೆಸ್ ಪಾರ್ಟ್​ನರ್​ಗಳ ಜತೆಗೂಡಿ ಗಂಡನ ಹತ್ಯೆಗೆ ಸ್ಕೆಚ್ ಹಾಕಿದ್ದಾಳೆ. ಇದರಿಂದ ಮೂರು ಜನ ಸೇರಿ ರಾಜು ಕೊಲೆ ಮಾಡಲು 10 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟಿದ್ದರು..

ಮಾರ್ಚ್ 15ರಂದು ಬೆಳಗ್ಗೆ 5.30ರ ವೇಳೆ ರಾಜು ಮನೆಯಿಂದ ಕಾರಿನಲ್ಲಿ ತೆರಳಿದ್ದ. ಬೆಳಗ್ಗೆ 6 ಗಂಟೆ ಸುಮಾರಿಗೆ ಕಾರು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಅಟ್ಯಾಕ್ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಎರಡು ಕಾಲುಗಳ ಮೇಲೆ ಹಲ್ಲೆ ಮಾಡಿದ್ದರು. ತೀವ್ರ ರಕ್ತ ಸ್ರಾವವಾಗಿ ರಾಜು ಸ್ಥಳದಲ್ಲೇ ಮೃತಪಟ್ಟಿದ್ದನು.

RELATED TOPICS:
English summary : Wife of Rs 10 lakh for husband murder All three are Arrest

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...