ಪಶ್ಚಿಮ ಬಂಗಾಳದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ : ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್, ಬಿಜೆಪಿ ಒತ್ತಾಯ | JANATA NEWS

23 Mar 2022
436

ಕೊಲ್ಕೊತ್ತಾ : ಪಶ್ಚಿಮ ಬಂಗಾಳದ, ಬಿರ್‌ಭೂಮ್‌ನ ರಾಮ್‌ಪುರಹತ್‌ನಲ್ಲಿ ಹಿಂಸಾಚಾರ ಮತ್ತು ಬೆಂಕಿ ಹಚ್ಚಿ ನಡೆಸಿದ ನರಮೇದವನ್ನು ವಿರೋಧಿಸಿ ಸಿಲಿಗುರಿಯಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಲ್ಲಿ ಎಂಟು ಜನರನ್ನು ಮನೆಯೊಳಗೇ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು.

ಲೋಕಸಭೆ ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಎಸ್‌ಐಟಿಯಿಂದ ಯಾವುದೇ ಪ್ರಯೋಜನವಾಗದು. ಬಿರ್ಹುಮ್ ಘಟನೆಯ ಕುರಿತು ನಾನು ಭಾರತದ ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇನೆ, ರಾಜ್ಯದಲ್ಲಿ 355 ನೇ ವಿಧಿಯನ್ನು ಪರಿಗಣಿಸಲು (ಹೇರಿಸಲು) ಸೂಚಿಸುತ್ತೇನೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಬಂಗಾಳದಲ್ಲಿ ಜನರು ಅಸುರಕ್ಷಿತರಾಗಿದ್ದಾರೆ, ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಭೀತಿಯ ವಾತಾವರಣವಿದ್ದು, ಗ್ರಾಮಗಳು ನಿರ್ಜನವಾಗಿವೆ. ನಾಚಿಕೆಗೇಡಿನ ಸಂಗತಿ ಎಂದರೆ ಈ ಸರ್ಕಾರ ಹಲವಾರು ಅಮಾಯಕರನ್ನು ಸಾಯಿಸಿರುವುದು. ಪೊಲೀಸರು ನಿಂತಲ್ಲೇ ನಿಂತರು ಮತ್ತು ಏನೂ ಮಾಡಲಿಲ್ಲ. ಮಮತಾ ಬ್ಯಾನರ್ಜಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎಗೆ ಹಸ್ತಾಂತರಿಸಬೇಕು, ಎಂದು ಪ.ಬಂ. ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೇಳಿದ್ದಾರೆ.

ಲೋಪಿ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ ನಿಯೋಗವು ಇಂದು ಬಿರ್ಭೂಮ್‌ನ ರಾಮ್‌ಪುರಹಟ್‌ಗೆ ಭೇಟಿ ನೀಡಿದೆ. ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯಾದ ಗಂಟೆಗಳ ನಂತರ ನಿನ್ನೆ ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಎಂಟು ಸುಟ್ಟ ಮೃತದೇಹಗಳು ಇಲ್ಲಿ ಪತ್ತೆಯಾಗಿವೆ.

ಅತ್ಯಂತ ದುರದೃಷ್ಟಕರ ಘಟನೆ, ಇದನ್ನು ಖಂಡಿಸಲು ಯಾವುದೇ ಪದಗಳು ಸಾಕಾಗುವುದಿಲ್ಲ. ಕಲ್ಕತ್ತಾ ಹೈಕೋರ್ಟ್ ಕೇಂದ್ರೀಯ ವಿಧಿವಿಜ್ಞಾನಕ್ಕೆ ನಿರ್ದೇಶನ ನೀಡಿದೆ. ನಾವು ಎನ್‌ಐಎ ಅಥವಾ ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಎಸ್‌ಐಟಿ ರಾಜ್ಯ ಸರ್ಕಾರದ ಒಂದು ವಿಭಾಗವಾಗಿದ್ದು, ಸಿಎಂ ಸರ್ಕಾರವನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಬಂಗಾಳವನ್ನು ಉಳಿಸಲು ರಾಷ್ಟ್ರಪತಿ ಆಳ್ವಿಕೆಯೊಂದೇ ದಾರಿ ಎಂದು ಸುವೆಂದು ಅಧಿಕಾರಿ ಹೇಳಿದ್ದಾರೆ.

RELATED TOPICS:
English summary : The worsening law order in West Bengal: Congress and BJP demand President rule

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...