ನಾನು ಯಾವತ್ತೂ ಹುಟ್ಟಿದ ಹಬ್ಬ ಆಚರಣೆ ಮಾಡಲ್ಲ, ಕಾರಣ ಯಾವಾಗ ಹುಟ್ಟಿದ್ದೇನೆ ಎಂದು ಗೊತ್ತಿಲ್ಲ | JANATA NEWS

24 Mar 2022
523

ಬೆಂಗಳೂರು : ವಿಧಾನಸಭೆಯಲ್ಲಿ ತಮ್ಮ ಮಾತುಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈಶ್ವರಪ್ಪರ ಕಾಲ್ ಎಳೆದರು.

ಈಶ್ವರಪ್ಪ ಅವರು ಇವತ್ತು ಸಿದ್ದರಾಮಯ್ಯ ಕ್ಲೀನ್ ಶೇವ್ ನೋಡಿ, ಏನ್ ಸ್ಮಾರ್ಟ್ ಆಗಿ ಬಂದಿದ್ದೀರಾ ಎಂದು ಕಿಚಾಯಿಸಿದರು. ಆಗ ಹಾಸ್ಯದಲ್ಲೇ ಉತ್ತರ ಕೊಟ್ಟ ಸಿದ್ದರಾಮಯ್ಯ ವಾರಕ್ಕೊಮ್ಮೆ ಹೀಗೆ ಶೇವ್ ಮಾಡಿಸ್ತೀನಿ. ಇಲ್ಲದಿದ್ದರೆ ನಿನ್ನಂತವರು ವಯಸ್ಸಾಯ್ತು ಅಂತಾ ಕಾಲೆಳೆಯುತ್ತಾರಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಅನೇಕರು ಹುಟ್ಟು ಹಬ್ಬದ ಶುಭಾಶಯ ಕೋರುವಾಗ ವಯಸ್ಸು ಹಾಕಲ್ಲ. ನಿಮಗೆ 75 ಆಗಿದೆ ಎಂದು ಯಾರು ಹೇಳುತ್ತಾರೆ? ಯಾರೂ ಹೇಳಲ್ಲ ಎಂದು ಸಿದ್ದರಾಮಯ್ಯ ಅವರ ಕಾಲೆಳೆದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ನನಗೂ ಗೊತ್ತಿಲ್ಲ,ನನಗೆ ಎಷ್ಟು ವಯಸ್ಸು ಅಂತ ಗೊತ್ತಿಲ್ಲ. ನನಗೂ ಗೊತ್ತಿಲ್ಲ, ನಮ್ಮ ಮನೆಯರಿಗೂ ಗೊತ್ತಿಲ್ಲ. ನನ್ನ ಹುಟ್ಟಿದ ದಿನವನ್ನ ನಮ್ಮ‌ಸ್ಕೂಲ್ ಮೇಷ್ಟ್ರು ರಾಜಪ್ಪ ಅಂತ ಅವರೇ ಬರೆದುಕೊಂಡಿದ್ದಾರೆ.. 3-8-1947 ಅಂತ ಬರೆದುಕೊಂಡಿದ್ದಾರೆ.. ಅದಕ್ಕೆ ನಾನು ನನ್ನ ಹುಟ್ಟುಹಬ್ಬವನ್ನೇ ಆಚರಿಸಿಕೊಳ್ಳಲ್ಲ. ಮೇಷ್ಟ್ರು ಹೇಳಿದ ದಿನಾಂಕದ ಪ್ರಕಾರ ನನಗೆ 75 ವರ್ಷ ಎಂದು ಹೇಳಿದರು.

ನಾನು ಯಾವತ್ತೂ ಹುಟ್ಟಿದ ಹಬ್ಬ ಆಚರಣೆ ಮಾಡಲ್ಲ, ಕಾರಣ ಯಾವಾಗ ಹುಟ್ಟಿದ್ದೇನೆ ಎಂದು ಗೊತ್ತಿಲ್ಲ. ನಮ್ಮ ಅಪ್ಪ ಅಮ್ಮ ಹೆಬ್ಬೆಟ್ಟು ಒತ್ತುವವರು ಹಾಗಾಗಿ ಹುಟ್ಟಿದ ದಿನವನ್ನು ಬರೆದುಕೊಂಡಿರಲಿಲ್ಲ. ಹಾಗಾಗಿ ಶಾಲೆಯಲ್ಲಿ ಬರೆದುಕೊಂಡ ಪ್ರಕಾರ ನನಗೆ 75 ವರ್ಷ ಎಂದು ಅಂದು ಕೊಂಡಿದ್ದೇನೆ. ಆದರೆ ನೀನು 60 ವರ್ಷ ಎಂದರೆ ಪರವಾಗಿಲ್ಲ ಎಂದು ಈಶ್ವರಪ್ಪ ಅವರ ಕಾಲೆಳೆದರು.

RELATED TOPICS:
English summary :I am old enough to shave once a week: Siddaramaiah

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...