ಮುಳುಗುತ್ತಿದ್ದ ಪತ್ನಿಯನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲು.. | JANATA NEWS

ರಾಮನಗರ : ರಾಮನಗರದ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿಯ ಕೆರೆಯಲ್ಲಿ ಕುರಿಗಳ ಮೈತೊಳೆಯಲು ಹೋಗಿದ್ದ ದಂಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೂಡ್ಲೂರು ಗ್ರಾಮದ ವೆಂಕಟೇಶ್ (48) ಮತ್ತು ಪಾರ್ವತಮ್ಮ (42) ಸಾವಿಗೀಡಾದ ದಂಪತಿ.
ಈ ದಂಪತಿ ಕುರಿಗಳ ಮೈ ತೊಳೆಯಲು ಕೆರೆ ಬಳಿಗೆ ಕರೆದೊಯ್ದಿದ್ದರು. ಈ ಸಂದರ್ಭದಲ್ಲಿ ಪತ್ನಿ ಜಾರಿ ನೀರಲ್ಲಿ ಮುಳುಗಲಾರಂಭಿಸಿದ್ದರು. ಆಕೆಯನ್ನು ರಕ್ಷಿಸಲೆಂದು ಪತಿಯೂ ನೀರಿಗೆ ಧುಮುಕಿದ್ದು, ಬಳಿಕ ಇಬ್ಬರೂ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
English summary :Went to rescue a drowning wife and he also dead...