ವರದಕ್ಷಿಣೆ ಕಿರುಕುಳ: ವಿಷ ಕುಡಿದು ನವವಿವಾಹಿತೆ ಆತ್ಮಹತ್ಯೆ | JANATA NEWS

ಚಿಕ್ಕಮಗಳೂರು : ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದ ಗಾನವಿ (27) ಸಾವಿಗೀಡಾದ ಯುವತಿ.
ಎನ್.ಆರ್. ಪುರ ತಾಲೂಕಿನ ಬನ್ನೂರು ಗ್ರಾಮದ ಗಾನವಿ ಕಳೆದ ವರ್ಷವಷ್ಟೇ ನಂದಿತ್ನನ್ನು ಮದುವೆಯಾಗಿದ್ದರು.
ವರದಕ್ಷಿಣೆ ತರುವಂತೆ ಪೀಡಿಸಿ ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ನಂದಿತ್, ಅತ್ತೆ ಸಾವಿತ್ರಮ್ಮ, ಮಾವ ಚಂದ್ರೇಗೌಡ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪ ಮಾಡಲಾಗಿದೆ.
ನಂದೀಪ್ ಹಾಗೂ ಗಾನವಿಗೆ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿತ್ತು. ಮದುವೆಯಾದ ಬಳಿಕ ಅನೇಕ ಬಾರಿ ಹಣ ತರುವಂತೆ ನಂದಿತ್ ದೈಹಿಕ ಕಿರುಕುಳ ನೀಡಿ ಪೀಡಿಸುತ್ತಿದ್ದ ಎನ್ನಲಾಗಿದೆ. ಮೃತ ಗಾನವಿ ತಂದೆ ಲೋಕಪ್ಪಗೌಡ ಇತ್ತೀಚೆಗಷ್ಟೇ 2 ಲಕ್ಷ ಹಣ ನೀಡಿದ್ದರು. ಆದರೂ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸುತ್ತಿದ್ದನಂತೆ.
ಗಾನವಿ ತನ್ನ ಮೇಲೆ ಹಲ್ಲೆ ಮಾಡಿರುವ, ಬೈದಿರುವುದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾಳೆ. ಈ ರೀತಿ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳುವುದು ತಿಳಿದ ನಂತರ ಕೋಪಿತಗೊಂಡ ಗಂಡ ಗಾನವಿಗೆ ವಿಷ ಕುಡಿಸಿ ಕೊಲೆಗೈದಿದ್ದಾರೆ ಎಂದು ಗಾನವಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.