ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವತಿ | JANATA NEWS

ಮೈಸೂರು : ಯುವತಿಯೊಬ್ಬಳು ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ.
ಕಂದೇಗಾಲದ ತ್ಯಾಗರಾಜ್ ನಿವಾಸದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಕಳೆದ 4 ವರ್ಷಗಳಿಂದ ತ್ಯಾಗರಾಜ್ ಎಂಬ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವೇಳೆ ಯುವತಿ ಮದುವೆ ಪ್ರಸ್ತಾಪ ಮಾಡಿದ್ದಳು. ಆದರೆ, ಪ್ರಭು ಸ್ನೇಹಿತರ ಎದುರೇ ಯುವತಿಯ ಕಪಾಳಕ್ಕೆ ಹೊಡೆದು ಅವಮಾನಿಸಿದ್ದ. ಇದಾದ ಮೂರು ದಿನಗಳ ಬಳಿಕ ಪ್ರಭುಸ್ವಾಮಿ ಮನೆಗೆ ಆಗಮಿಸಿ ಪ್ರಿಯಕರನ ತಾಯಿ ಮುಂದೆ ಎಲ್ಲ ವಿಚಾರವನ್ನು ಯುವತಿ ಹೇಳಿದ್ದಳು.
ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸಿದ್ದಾನೆ. ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಮೂರು ದಿನಗಳ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಸಂಭ್ರಮಾಚರಣೆ ಕಪಾಳಕ್ಕೆ ಹೊಡೆದು ಅಪಮಾನ ಮಾಡಿದ್ದಾನೆ ಎಂದು ಆರೋಪಿಸಿ, ಪ್ರಿಯತಮನ ಕುಟುಂಬಸ್ಥರ ಎದುರೇ ವಿಷ ಸೇವನೆ ಮಾಡಿದ್ದಾಳೆ.
ಸದ್ಯ ಯುವತಿ ಅಸ್ವಸ್ಥಗೊಂಡಿದ್ದು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.