ವಿದ್ಯಾರ್ಥಿನಿ ಮುಸ್ಕಾನ್ ಮುಗ್ಧ ಹುಡುಗಿ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್​ಖೈದಾ ಭಯೋತ್ಪಾದಕರು ಬಳಸುತ್ತಾರೆ | JANATA NEWS

07 Apr 2022
426

ಬೆಂಗಳೂರು : ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಬಗ್ಗೆ ಅಲ್​ಖೈದಾ ಉಗ್ರ ಸಂಘಟನೆಯ ಬೆಂಬಲ ವಿಚಾರವಾಗಿ ಸಚಿವ ಡಾ. ಕೆ.ಸುಧಾಕರ್ ಪ್ರಕ್ರಿಯಿಸಿ, ಮುಸ್ಕಾನ್ ಮುಗ್ಧ ಹುಡುಗಿ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್​ಖೈದಾ ಭಯೋತ್ಪಾದಕರು ಬಳಸುತ್ತಾರೆ.

ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಆರೋಗ್ಯಸೌಧದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಭಯೋತ್ಪಾದಕರಿಗೆ ಜನರಲ್ಲಿ ಭಯ ಹುಟ್ಟಿಸಲು ಮಾತ್ರ ಸಾಧ್ಯವಾಗುತ್ತದೆ. ಭಯ ಹುಟ್ಟಿಸಲು ಅವರು ಜನರ ಮುಗ್ಧತೆಯನ್ನು ಮುಖ್ಯ ಅಸ್ತ್ರವಾಗಿ ಬಳಸಿಕೊಳ್ಳುತ್ತಾರೆ. ಮುಸ್ಕಾನ್ ಮುಗ್ಧ ಹುಡುಗಿ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್​ಖೈದಾ ಭಯೋತ್ಪಾದಕರು ಬಳಸುತ್ತಾರೆ. ಇಂತಹ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಾವೆಲ್ಲರೂ ಕಾನೂನು ಪಾಲನೆ ಮಾಡಬೇಕು. ನೆಲದ ಕಾನೂನನ್ನು ಗೌರವಿಸಬೇಕು. ಜೀವನದಲ್ಲಿ ಶಿಸ್ತು ಮುಖ್ಯವಾಗಿದ್ದು, ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗೆ ಗೌರವ ಕೊಡಬೇಕು. ಶಾಲೆಯಲ್ಲಿ ಧರ್ಮವನ್ನು ಬದಿಗಿಟ್ಟು ಶಿಕ್ಷಣಕ್ಕೆ ಗೌರವ ಕೊಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲದರಲ್ಲೂ ಒಗ್ಗಟ್ಟಿರಬೇಕು ಎಂದರು.

ಹಿಜಬ್, ಹಲಾಲ್ ಮೊದಲಾದ ಧಾರ್ಮಿಕ ವಿವಾದಗಳಲ್ಲಿ ಸರ್ಕಾರ ಯಾವುದೇ ಪಾತ್ರ ನಿರ್ವಹಿಸಿಲ್ಲ. ಆದರೆ ಕೆಲವರು ಇದು ಸರ್ಕಾರದ ಪ್ರಾಯೋಜಿತ ಎಂದು ಹೇಳುತ್ತಿದ್ದಾರೆ. ಈ ಸರ್ಕಾರ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ನಾವೆಲ್ಲರೂ ಎಲ್ಲ ಧರ್ಮಗಳನ್ನೂ ಗೌರವದಿಂದ ಕಾಣುತ್ತೇವೆ. ಪ್ರತಿ ಧರ್ಮಕ್ಕೂ ಸಹ ನಾವು ಗೌರವ ಕೊಡುತ್ತಿದ್ದೇವೆ.

ಧರ್ಮ, ಭಾಷೆ ಮೊದಲಾದ ಭಿನ್ನತೆಗಳ ನಡುವೆಯೂ ಏಕತೆ ಇರುವುದು ಅಗತ್ಯ. ನನಗೆ ಯಾವ ಧರ್ಮವನ್ನೂ ಗುರಿಯಾಗಿಸಲು ಇಷ್ಟವಿಲ್ಲ. ನಾನೊಬ್ಬ ಸೆಕ್ಯುಲರ್ ರಾಜಕಾರಣಿ. ಪ್ರತಿಯೊಬ್ಬರಿಗೂ ಅವರ ನಂಬಿಕೆಯನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ನ್ಯಾಯಾಲಯ ನೀಡುವ ತೀರ್ಪನ್ನು ಎಲ್ಲರೂ ಪಾಲಿಸಬೇಕು.

ಕಾನೂನು ಎಲ್ಲರಿಗೂ ಒಂದೇ. ಎಲ್ಲಾ ನಾಗರಿಕರು ಕಾನೂನು ಪಾಲಿಸಬೇಕು. ಯಾವುದೇ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಆದರೆ ಕೆಲ ವಿಚಾರದಲ್ಲಿ ರಾಜಕೀಯ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಮಸೀದಿಗಳ ಧ್ವನಿವರ್ಧಕಗಳ ವಿಚಾರವಾಗಿ ಮಾತನಾಡಿದ ಸುಧಾಕರ್​, ಧ್ವನಿವರ್ಧಕದ ವಿಚಾರವಾಗಿ ಈಗಾಗಲೇ ಕಾನೂನುಗಳಿವೆ. ಕೆಲ ವರ್ಷಗಳ ಹಿಂದೆಯೇ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಸ್ಪಷ್ಟ ಸೂಚನೆ ಕೊಟ್ಟಿದೆ. ಆರೋಗ್ಯದ ಮೇಲೆ ಧ್ವನಿ ಮಾಲಿನ್ಯ ಕೂಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.

RELATED TOPICS:
English summary :Al-Qaeda terrorists use student innocence as a weapon

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...