AC ಸ್ಫೋಟ: ಒಂದೇ ಕುಟುಂಬದ ನಾಲ್ವರು ಸಜೀವ ದಹನ | JANATA NEWS

ವಿಜಯನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಸಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.
ರಾಘವೇಂದ್ರ ಶೆಟ್ಟಿ ಎಂಬವರ ಮನೆಯಲ್ಲಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಸಿಯ ವಿಷಾನಿಲ ಸೋರಿಕೆಯಾಗಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಈ ಅವಘಡದಲ್ಲಿ ವೆಂಕಟ್ ಪ್ರಶಾಂತ್ (42), ಪತ್ನಿ ಡಿ.ಚಂದ್ರಕಲಾ (38), ಮಕ್ಕಳಾದ ಎಚ್.ಎ.ಅದ್ವಿಕ್(16), ಪ್ರೇರಣಾ,(8) ಹೊರಬರಲಾಗದೇ ಮೃತಪಟ್ಟಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಹೊತ್ತು ನಿದ್ದೆ ಮಾಡುತ್ತಿದ್ದ ವೇಳೆ ಎಸಿ ಸ್ಫೋಟಗೊಂಡು ಬೆಂಕಿ ಧಗಧಗನೆ ಹೊತ್ತಿ ಉರಿದು ಇಡೀ ಮನೆ ಆವರಿಸಿದ್ದರಿಂದ ದಂಪತಿ ಮತ್ತು ಮಕ್ಕಳು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ.
ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.