ಧರ್ಮಸ್ಥಳ & ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಯಶ್ | JANATA NEWS
ಮಂಗಳೂರು : ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬಂದಿದ್ದ ಯಶ್ ನಂತರ ಕಾರ್ನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿ ದೇವರ ದರ್ಶನ ಪಡೆದಿದ್ದಾರೆ.
ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಯಶ್ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಜೊತೆಗೆ ಮಾತುಕತೆ ನಡೆಸಿದರು.
ಇನ್ನು ಕುಕ್ಕೆ ಮತ್ತು ಧರ್ಮಸ್ಥಳದಲ್ಲಿ ಭಾನುವಾರವಾಗಿದ್ದ ಕಾರಣ ಜನರು ಹೆಚ್ಚಿದ್ದರು, ಈ ನಡುವೆ ರಾಕಿಂಗ್ ಸ್ಟಾರ್ ನೋಡಿ, ನಟ ಯಶ್ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.