ಬೆಂಗಳೂರಲ್ಲಿ ಇಂದೂ ಕೂಡ ಮಳೆ ಸಾಧ್ಯತೆ: ಹವಾಮಾನ ವರದಿ | JANATA NEWS
ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬುಧವಾರ ಸಂಜೆ ಮಳೆಯಾಗಿದೆ.
ಬೆಂಗಳೂರು, ಮೈಸೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ.
ನಿನ್ನೆ ಸಂಜೆ ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಶಾಂತಿನಗರ, ಕೋರಮಂಗಲ, ಆಡುಗೋಡಿ, ಮೆಜೆಸ್ಟಿಕ್, ಜೆ.ಸಿ. ನಗರ, ಜೆ.ಪಿ. ನಗರ. ಎಲೆಕ್ಟ್ರಾನಿಕ್ ಸಿಟಿ, ವಿಜಯನಗರ, ಬನಶಂಕರಿ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಬಿರುಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.