ಇನ್ನೂ ಮೂರು ದಿನಗಳವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ : ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಆದೇಶ | JANATA NEWS

15 Apr 2022
367

ಬೆಂಗಳೂರು : ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತಗೊಂಡಿವೆ. ಪರಿಸ್ಥಿತಿಯನ್ನು ಮತ್ತು ಭರವಸೆ ಹದಗೆಡಿಸುವಂತೆ, ಇನ್ನೂ ಮೂರು ದಿನಗಳವರೆಗೆ ಬೆಂಗಳೂರಿಗೆ "ಭಾರೀ ಮಳೆ" ಮುನ್ಸೂಚನೆಯನ್ನು ಹವಾಮಾನ ಇಲಾಖೆಯಿಂದ ದೊರತಿದೆ.

ಅರ್ಧ ಗಂಟೆಯಿಂದ ಒಂದು ಗಂಟೆಯ ಅವಧಿಯಲ್ಲಿ 73 ಮಿ.ಮೀ ವರೆಗಿನ ಅತಿ ಹೆಚ್ಚು ಮತ್ತು ಬಿರುಸಿನ ಮಳೆಯೇ ನೀರು ನಿಲ್ಲಲು ಕಾರಣ ಎನ್ನುತ್ತಾರೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ.

ನಗರದ ಹಲವೆಡೆ ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ಜಲಾವೃತಗೊಂಡಿದ್ದರಿಂದ ಜನರು ಪರದಾಡುವಂತಾಯಿತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಅಗ್ನಿಶಾಮಕ ಇಲಾಖೆಯಿಂದ ಕೆಲವು ಪ್ರದೇಶಗಳಲ್ಲಿ ತುರ್ತು ಕಾರ್ಯಾಚರಣೆ ನಡೆಸಲಾಯಿತು.

ಗುರುವಾರ ಬಸ್ಸುಗಳು, ಕಾರುಗಳು ಮತ್ತು ಇತರ ವಾಹನಗಳು ರಭಸದಿಂದ ಹರಿಯುವ ನೀರಿನಲ್ಲಿ ಹೆಣಗಾಡುತ್ತಿರುವ ದೃಶ್ಯ ಕಂಡುಬಂತು. ಮಳೆಯಿಂದಾಗಿ ನಗರದ ಕೆಲವೆಡೆ ಮನೆಗಳು ಸೊಂಟದವರೆಗೂ ನೀರಿನಲ್ಲಿ ಮುಳುಗಿವೆ.

ಆದೇಶ ಅನುಸರಿಸಲು ವಿಫಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು, ಎಂದು ಗೌರವ್ ಗುಪ್ತಾ ಅಧಿಕಾರಿಗಳಿಗೆ ತಿಳಿಸಿದರು. ಹವಾಮಾನ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ಅದನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ, ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತುರ್ತು ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆಯ ಸಮಯದಲ್ಲಿ ಯಾವುದೇ ನಾಗರಿಕರು ಸಮಸ್ಯೆಗಳನ್ನು ಎದುರಿಸಬಾರದು ಎಂದು ಹೇಳಿದ್ದಾರೆ.

RELATED TOPICS:
English summary :Heavy rain forecast in Bengaluru for three more days: Order issued to the authorities to handle the situation

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...