ಕೆ.ಎಸ್​ ಈಶ್ವರಪ್ಪ ಬಂಧನ ಯಾಕೆ ಆಗಬೇಕು? ಹೆಚ್.ಡಿ.ಕುಮಾರಸ್ವಾಮಿ | JANATA NEWS

16 Apr 2022
371

ವಿಜಯಪುರ : ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್​ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ, ಆದರೆ ಬಂಧನ ಯಾಕೆ ಆಗಬೇಕು ಎಂದು ಈಶ್ವರಪ್ಪ ಪರ, ಕಾಂಗ್ರೆಸ್ ವಿರುದ್ಧ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಕೃಷ್ಣಾ ನದಿ ತೀರದಲ್ಲಿ ಮಾಜಿ ಸಿಎಂ ಹೆಚ್​ ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಆಲಮಟ್ಟಿಯ ಕೃಷ್ಣಾ ತೀರದಲ್ಲಿ ಜನತಾ ಜಲಧಾರೆ ಜನಜಾಗೃತಿ ಅಭಿಯಾನದ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷ್ಣೆಯ ಕಡೆಗೆ ನಡಿಗೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಾಡಿದ್ದೇನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜೀನಾಮೆ ಆಯ್ತು, ಈಗ ಬಂಧನಕ್ಕೆ ಹೋರಾಟ ಮಾಡುತ್ತಿದ್ದಾರೆ. ಇದರಿಂದ ಏನು ಉಪಯೋಗ ಇಲ್ಲ ನನಗೆ ಗೊತ್ತಿದೆ. ಈಗ ಸಂತೋಷ್ ಆತ್ಮಹತ್ಯೆ ವಿಷಯ ಇಟ್ಟುಕೊಂಡು ಹೊರಟಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನ ಎಲ್ಲಿಯವರೆಗೂ ತಡೆದುಕೊಳ್ಳುತ್ತಾರೆ. ಎರಡೂ ಪಕ್ಷವನ್ನ ಜನ ತಿರಸ್ಕರಿಸೋ ಕಾಲ ಬಂದಿದೆ.

ಘಟನೆ ನಡೆದ ವಾಸ್ತವಾಂಶವನ್ನ ಜನರ ಮುಂದೆ ಸರ್ಕಾರ ಇಡಬೇಕು. ಇದರಲ್ಲಿ ಯಾರ ಪಾತ್ರ ಇದೆ, ಯಾಕೆ ಘಟನೆ ನಡೆಯಿತು ಅನ್ನೋದರ ತನಿಖೆ ಆಗಬೇಕು. ಈಶ್ವರಪ್ಪ ಪರ್ಸೆಟೆಂಜ್ ಹೆಸರಲ್ಲಿ ಬೀದಿಗಿಳಿದವರು, ಅವತ್ಯಾಕೆ ಇಳಿಯಲಿಲ್ಲ. ಧರ್ಮ ಧರ್ಮಗಳ ನಡುವೆ ಸಂಘರ್ಷ ಆದಾಗ, ಇದೇ ಕಾಂಗ್ರೆಸ್ ಮೌನಕ್ಕೆ ಶರಣಾಗಿದ್ದು ಯಾಕೆ? ಸರ್ವಜನಾಂಗದ ಶಾಂತಿಯ ತೋಟವನ್ನ ಹಾಳು ಮಾಡುವಾಗ ಎಲ್ಲಿ ಹೋಗಿದ್ದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಾಗಿದೆ. ಕಾಂಗ್ರೆಸ್ಸಿನ ಭ್ರಷ್ಟಾಚಾರ ಮಾಹಿತಿ ತೆಗೆದರೆ ಒಂದು ಗುಡ್ಡದಷ್ಟು ಮಾಹಿತಿ, ದಾಖಲೆ ಸಮೇತ ಇಡಬಹುದು.

ಭ್ರಷ್ಟಾಚಾರ ವಿರುದ್ಧ ಹೊರಟಿರುವ ಕಾಂಗ್ರೆಸ್ ನಾಯಕರು ಐದು ವರ್ಷದ ಹಿಂದೆ ಎಷ್ಟು ಭ್ರಷ್ಟಾಚಾರ ಏರಿಸಿದ್ದಾರೆ ಎಂಬುದು ನಾಡಿನ ಜನತೆಗೆ ಗೊತ್ತಿರುವ ವಿಚಾರ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಟೀಕಾ ಪ್ರಹಾರ ಮಾಡಿದರು.

RELATED TOPICS:
English summary :Why should KS Eshwarappa be arrested? HDK

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...