ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಮಳೆ:ಹವಾಮಾನ ಇಲಾಖೆ | JANATA NEWS

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕಳೆದ ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರಿನ ಹವಾಮಾನ ಇಲಾಖೆಯು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ 4ನೇ ದಿನವೂ ಮಳೆರಾಯ ಅಬ್ಬರಿಸಿದ್ದಾನೆ. ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ.