ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ | JANATA NEWS

ಬೆಂಗಳೂರು : ಇಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿ ಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಿದರು.
ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ನಗರದ ಜೆಪಿ ಭವನದಲ್ಲಿ ನಡೆದ ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ನಿರ್ಗಮಿತ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಪಕ್ಷದ ಧ್ವಜವನ್ನು ಸಿ.ಎಂ. ಇಬ್ರಾಹಿಂ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಅಧಿಕಾರ ಸ್ವೀಕಾರ ಮಾಡಿ ಸಿ.ಎಂ.ಇಬ್ರಾಹಿಂ ಬಿಜೆಪಿ-ಕಾಂಗ್ರೆಸ್ನಲ್ಲಿ ಹೋರಾಟ ಮಾಡಲು ಆಗಲ್ಲ. ಕಾಲ ಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ ಹರ ಹರ ಮಹದೇವ ಎಂದು ಜೋಳಿಗೆ ತೆಗೆದುಕೊಂಡು ಹೊರಡುತ್ತೇನೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ನನಗಿಂತ ದೊಡ್ಡ ಪೋರ್ಟ್ ಫೋಲಿಯೋ ತಗೊಂಡಿದ್ದಾರೆ. ನಮ್ಮದು ಬರೀ ತುತ್ತೂರಿ ಊದುವುದು. ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂದರು.