ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳೋದಿಲ್ಲ ಎಂದು ನಿಮ್ಮಪ್ಪನ ಮೇಲೆ ಆಣೆ ಮಾಡಿ | JANATA NEWS

19 Apr 2022
406

ಬೆಂಗಳೂರು : ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಸವಾಲು ಹಾಕಿದ್ದಾರೆ.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದಿದ್ದಕ್ಕೆ ಸಿಟ್ಟಾಗಿದ್ದ ಸಿಟ್ಟಾದ ಕುಮಾರಸ್ವಾಮಿ, ಬೆಳಗ್ಗೆ ಸಿದ್ದರಾಮಯ್ಯ ಅಲ್ಲ ಸುಳ್ಳರಾಮಯ್ಯ ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ರು, ಇದೀಗ ಸಿದ್ದರಾಮಯ್ಯ ಸಹ ಸರಣಿ ಟ್ವೀಟ್​ ಮಾಡಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ.

ಜಾತ್ಯಾತೀತ ಪಕ್ಷ ಎನ್ನುತ್ತೀರಲ್ವಾ, ಹಾಗಾದರೆ ಚುನಾವಣಾ ಪೂರ್ವ ಹಾಗೂ ಚುನಾವಣಾ ‍ಬಳಿಕ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿ, ನಾಡಿನ ಜನತೆ ಸುಲಭವಾಗಿ ನಿಮ್ಮನ್ನು ನಂಬಲಾರರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳವುದಿಲ್ಲ ಎಂದು ನಿಮ್ಮ ತಂದೆ ಹೆಚ್. ಡಿ ದೇವೇಗೌಡರ ಮೇಲೆ ಪ್ರಮಾಣ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜು ಕಾರುತ್ತಿರುವ ಹೆಚ್ಡಿ ಕುಮಾರಸ್ವಾಮಿ ಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ.

ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ.

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ?

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ 'ಬಿ-ಟೀಮ್' ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ. ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ, ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ. ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ. ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು - ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Swear to your brother that he is not allied with the BJP

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...