ರಾಜ್ಯದಲ್ಲಿ ಕೊರೋನಾ 4ನೇ ಅಲೆ ಬಂದಿಲ್ಲ, ಮುನ್ನೆಚ್ಚರಿಕೆ ಕ್ರಮ ಅಗತ್ಯ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್ | JANATA NEWS

ಬೆಂಗಳೂರು : ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಹಾವಳಿ ಹೆಚ್ಚಾಗುತ್ತಿದೆ.
ಕರ್ನಾಟಕದಲ್ಲಿ ಸದ್ಯಕ್ಕೆ ಇನ್ನೂ ಆ ಪರಿಸ್ಥಿತಿ ಇಲ್ಲ. ಮುಂದೊಂದು ವಾರದಲ್ಲಿ ಸ್ಪಷ್ಟ ಚಿತ್ರಣ ಸಿಗಬಹುದು ಎಂದರು. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದ್ದಾರೆ.
ಎರಡನೇ ಡೋಸ್ ಸುಮಾರು 30 ಲಕ್ಷ ಜನ ಇನ್ನು ತೆಗೆದುಕೊಂಡಿಲ್ಲ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ ಎಂದರು. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.