Thu,Apr18,2024
ಕನ್ನಡ / English

ಸೆಮಿಕಂಡಕ್ಟರ್ ಪ್ಲ್ಯಾಂಟ್ ನಿರ್ಮಾಣ ಕಂಪನಿ ಜೊತೆ ಸರ್ಕಾರ ಒಪ್ಪಂದ | JANATA NEWS

01 May 2022
3037

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ( 3 ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಇಂದು ಸಹಿ ಹಾಕಲಾಯಿತು.

ರಾಜ್ಯ ಸರ್ಕಾರದ ಪರವಾಗಿ ಕೈಗಾರಿಕೆ ಇಲಾಖೆಯ ಎಸಿಎಸ್ ಡಾ.ರಮಣರೆಡ್ಡಿ ಮತ್ತು ISMC ಅನಲಾಗ ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಅಜಯ ಜಲನ್ ಒಡಂಬಡಿಕೆ ಪತ್ರಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಹಿ ಹಾಕಲಾಯಿತು. ಹಾಗೂ ಒಡಂಬಡಿಕೆ ಪತ್ರವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪರಸ್ಪರ ವಿನಿಮಯ ಮಾಡಿಕೊಳ್ಳಲಾಯ್ತು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಐಟಿ ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾವರ್ ಗಿಲೋನ್, ಇರೇಜ್ ಇಂಬರಮನ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಐ.ಎಸ್.ಎಂ.ಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ ಎಂದು ತಿಳಿಸಿದರು.

ವಿವಿಧ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ಧ ವೇಳೆಯಲ್ಲಿಯೇ ಈ ಮಹತ್ವದ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ. ಕೇವಲ ಆರ್ಥಿಕ ಪ್ರೋತ್ಸಾಹಕಗಳು ಮಾತ್ರವಲ್ಲದೆ, ಒಟ್ಟಾರೆ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದೂ ಮುಖ್ಯ ಎನ್ನುವುದನ್ನು ಕರ್ನಾಟಕ ಸರ್ಕಾರ ಅರಿತಿದೆ. ದೇಶದಲ್ಲಿಯೇ ಅತ್ಯುತ್ತಮ ಮೂಲಭೂತ ಸೌಕರ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಹೊಂದಿದೆ ಎಂದು ಅವರು ಹೇಳಿದರು.

ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರದ ಸೆಮಿಕಂಡಕ್ಟರ್ ಮಿಷನ್ ನ್ನು ಅನುಮೋದಿಸಿರುವುದರಿಂದ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕ ಮುಂದುವರೆಯಲು ಸಾಧ್ಯವಾಗಿದೆ ಎಂದರು.

RELATED TOPICS:
English summary :Government contract with Semiconductor Plant Construction Company

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...