ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ್ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ? | JANATA NEWS

02 May 2022
406

ಬೆಂಗಳೂರು : ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವತ್ಥ್ ನಾರಾಯಣ್ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಈ ಪ್ರಕರಣದ ವಿಚಾರವಾಗಿ ನನ್ನ ವಿರುದ್ಧ ದಾಖಲೆ ಇದ್ದರೆ ಶಿವಕುಮಾರ್ ಅವರು ಪ್ರಕಟಿಸಲಿ ಎಂದು ಸಚಿವ ಅಶ್ವಥ್ ನಾರಾಯಣ್ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅವರು ದೊಡ್ಡವರು, ದೊಡ್ಡವರಾಗಬೇಕು ಎಂದುಕೊಂಡಿರುವವರು. ಅವರ ವಿಚಾರವನ್ನು ನಾನು ಬಿಚ್ಚಿಡಲಿಲ್ಲ. ಮಾಧ್ಯಮಗಳು ಮಾಗಡಿಯ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದಾಗ ಸಂತೋಷವಾಗಿತ್ತು. ಆನಂತರ ನಮ್ಮ ಪಕ್ಷದಲ್ಲಿದ್ದ ಕಾರ್ಯಕರ್ತರ ಕುಟುಂಬದವರು ಆಗಿದ್ದಾರೆ ಎಂದು ಹೇಳಿದ್ದು ಕೇಳಿ ಖುಷಿ ಆಯ್ತು. ಪರಿಸ್ಥಿತಿ ಹೀಗಿರುವಾಗ ಅನುಮಾನಗಳೆಲ್ಲವೂ ತಮ್ಮ ವಿರುದ್ಧವೇ ತಿರುಗುತ್ತಿದೆ ಎಂದು ಸಚಿವರು ಯಾಕೆ ಭಾವಿಸುತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರೋದು ಆ ಮಂತ್ರಿಯ ತಮ್ಮ ಎಂದು ನಾನು ಹೇಳಲ್ಲ. ನಮಗಿರುವ ಮಾಹಿತಿ ಪ್ರಕಾರ ಮಾಗಡಿಯ ಅಭ್ಯರ್ಥಿಗಳು ಅವರು. ಈ ವಿಚಾರ ತನಿಖೆಗೆ ಬಂದಾಗ ಮಂತ್ರಿಗಳೇ ಫೋನ್ ಮಾಡಿ ನಿಲ್ಲಿಸಿದ್ದಾರೆ ಎನ್ನಲಾಗಿದೆ. ತನಿಖೆ ಪೂರ್ತಿ ಆಗದೇ ಪರೀಕ್ಷೆಯನ್ನ ನಿಲ್ಲಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಡಿಜಿ ಹಾಗೂ ಗೃಹ ಸಚಿವರು ಬೇರೆ ಬೇರೆ ಮಾಹಿತಿಯನ್ನ ನೀಡಿದ್ದಾರೆ. ನನಗೆ ಮಾಹಿತಿ ಇರುವ ಪ್ರಕಾರ ಕೆಲವರ ಹೆಸರು ತನಿಖೆ ವೇಳೆ ಗೊತ್ತಾಗಿದೆ. ಆದರೆ ಸಿಐಡಿ ಅಧಿಕಾರಿಗಳು ಯಾರ ಮನೆಗೆ ಹೋಗಿದ್ರು? ಅವರ ತನಿಖೆ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಪಾಪ ಉಸ್ತುವಾರಿ ಸಚಿವರು ಗಂಡಸು ಯಾರಿದ್ದಾರೆ ಎಂದು ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರಲ್ಲಿ ಗಂಡಸರಿಲ್ಲ, ನಾವೆಲ್ಲಾ ಹೆಂಗಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿ ಎಲ್ಲರೂ ಅವರ ಗಂಡಸ್ತನ ನೋಡಿ ಗಢ ಗಢ ನಡಗುತ್ತಿದ್ದೇವೆ.

ಮುಖ್ಯಮಂತ್ರಿಗಳ ಮುಂದಯೇ ಗಂಡಸು ಯಾರು ಅಂತ ಕೇಳಿದ್ದರು. ಸಚಿವರೊಬ್ಬರ ಹೆಸರು ಪಿಎಸ್‌ಐ ಅಕ್ರಮದಲ್ಲಿ ಕೇಳಿ ಬಂದಿದೆ. ಅವರ ತಮ್ಮ ಎಂದು ಹೇಳಲ್ಲ, ಅವರ ಕುಟುಂಬಸ್ಥರು, ಸಂಬಂಧಿಕರು ಭಾಗಿಯಾಗಿದ್ದಾರೆ ಅನ್ನೋ‌ ಮಾಹಿತಿ ಬಂದಿದೆ. ಸಿಎಂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಪ್ರತಿನಿತ್ಯ ಬಂಡವಾಳ ಬಿಚ್ಚಿಡುತ್ತೇನೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮೊದಲು ಅವರು ವಿವಿಧ ನೇಮಕಾತಿ ಅಕ್ರಮದಲ್ಲಿ ಯುವಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲಿ, ನಂತರ ಉಳಿದ ವಿಚಾರ ಮಾತನಾಡೋಣ ಎಂದರು.

RELATED TOPICS:
English summary :I am not saying that the Minister of the PSI is involved in the scam

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...