ಭೀಕರ ಅಪಘಾತ: ಮೈಜುಮ್ಮೆನಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ | JANATA NEWS
ಬೆಳಗಾವಿ : ಬೆಳಗಾವಿ ತಾಲೂಕಿನ ಸುತ್ತಗಟ್ಟಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸ್ಸೊಂದಕ್ಕೆ ಅಡ್ಡಲಾಗಿ ಬೈಕೊಂಡು ಬಂದಿದ್ದು ಆತನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮತ್ತೊಂದು ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ.
ಬೆಳಗಾವಿಯಿಂದ ಈ ಬಸ್ ಸಂಕೇಶ್ವರದತ್ತ ತೆರಳುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಬೆಳಗಾವಿಯಿಂದ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅತಿವೇಗದಲ್ಲಿ ಬಂದಿದೆ. ರಸ್ತೆ ಮಧ್ಯೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಬಸ್ ಚಾಲಕ ಮುತ್ತಪ್ಪ ಎಂಬುವವರು ರಸ್ತೆ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಡಿವೈಡರ್ಗೆ ಗುದ್ದಿ, ಬಸ್ ನಿಲ್ಲಿಸುತ್ತಾನೆ.
ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಪವಾಡ ಎಂಬಂತೆ ಬದುಕುಳಿದಿದ್ದಾನೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.