Sat,May18,2024
ಕನ್ನಡ / English

ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ಪಕ್ಷವೇ ಹೊಸ ನಾಯಕತ್ವವನ್ನು ಹುಟ್ಟು ಹಾಕಲಿದೆ: ಕುಮಾರಸ್ವಾಮಿ | JANATA NEWS

10 May 2022
3058

ಬೆಂಗಳೂರು : ಪಕ್ಷಕ್ಕೆ ಡ್ಯಾಮೇಜ್ ಮಾಡಲು ಮುಂದಾದರೆ ಅವರೇ ಬೀದಿಪಾಲಾಗುತ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನೆಲಮಂಗಲ ಸಮೀಪದಲ್ಲಿ ನಡೆಯುವ ಜನತಾ ಜಲಧಾರೆ ಸಮಾವೇಶ ನಡೆಯುವ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಮಾತನಾಡಿ, ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದು, ಮೇ 13 ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಜೆಡಿಎಸ್‍ ತೊರೆಯಲು ಮುಂದಾಗಿರುವ ಹಾಗೂ ಪಕ್ಷದ ವಿರುದ್ಧ ಮಾತನಾಡುತ್ತಿರುವವರಿಗೆ ಎಚ್ಚರಿಕೆಯನ್ನು ಈ ಸಂದರ್ಭದಲ್ಲಿ ನೀಡಿದರು. ಕೆಲವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಪಕ್ಷಕ್ಕೆ ಹಾನಿ ಮಾಡಲು ಹೋದರೆ ಅವರೇ ಬೀದಿಪಾಲಾಗುತ್ತಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಬಿ.ಎಲ್ ಶಂಕರ್ ಕಾಂಗ್ರೆಸ್ ಗೆ ಹೋಗಿ ಏನಾದರು? ಇಪ್ಪತ್ತು ವರ್ಷವಾಯಿತು, ಅಲ್ಲಿ ಏನಾಗಿದ್ದಾರೆ ಕುಮಾರಸ್ವಾಮಿ ಪ್ರಶ್ನಿಸಿದರು.

ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ಪಕ್ಷವೇ ಹೊಸ ನಾಯಕತ್ವವನ್ನು ಹುಟ್ಟು ಹಾಕಲಿದೆ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು. ಕಾಂಗ್ರೆಸ್, ಬಿಜೆಪಿ ಈ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬಗ್ಗೆ ಭಯ ಇದೆ. ಅದೇ ಕಾರಣಕ್ಕೆ ನಮ್ಮ ಪಕ್ಷವನ್ನೇ ಟಾರ್ಗೆಟ್ ಮಾಡುತ್ತಿವೆ ಎಂದು ಅವರು ಎಚ್‌ಡಿಕೆ ವಾಗ್ದಾಳಿ ನಡೆಸಿದರು.

ಹಣ ಇದ್ದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಮರಿತಿಬ್ಬೇಗೌಡ ಮಾತನಾಡಿರುವುದನ್ನು ಗಮನಿಸಿದ್ದೇನೆ. ನಮ್ಮ‌ ಪಕ್ಷಕ್ಕೆ ಅವರು ಎಷ್ಟು ಹಣ ಸಂದಾಯ ಮಾಡಿದ್ದಾರೆ? ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದಾಗ ಎಷ್ಟು ನೀಡಿದ್ದಾರೆ? ಯಾವ ನಾಯಕರಿಗೆ ಹಣ ಸಂದಾಯ ಮಾಡಿದ್ದರು ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಗೆ ಕೊಟ್ರೋ? ದೇವೇಗೌಡರಿಗೆ ಕೊಟ್ರೋ? ಇಲ್ಲವೇ ಜನತಾದಳದ ಅಕೌಂಟ್​ಗೆ ಕೊಟ್ಟಿದ್ದಾರೋ? ಅವರ ಚುನಾವಣಾ ಖರ್ಚು ವೆಚ್ಚಕ್ಕೆ ಪಕ್ಷದಿಂದ ಎಷ್ಟು ಕೊಟ್ಟಿದ್ದೇವೆ. ಇದೆಲ್ಲದರ ಬಗ್ಗೆ ಅವರು ಸತ್ಯ ಹೇಳುತ್ತಾರಾ?. ಈ ರೀತಿಯ ಕ್ಷುಲ್ಲಕವಾದ ಹೇಳಿಕೆಗಳ ಬಗ್ಗೆ ಜನರೇ ತೀರ್ಮಾನಿಸುತ್ತಾರೆ ಎಂದು ತಿರುಗೇಟು ನೀಡಿದರು.

RELATED TOPICS:
English summary : No one is indispensable for the party. It is the party that will produce the new leadership

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...