ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ | JANATA NEWS
ಬೆಂಗಳೂರು : ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದುಕೊರತೆಗಳನ್ನು ನೀಗಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ-ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ. ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕ ಬಂಧುಗಳಿಗೆ ಅಭಿನಂದನೆಗಳು ಎಂದಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದು ಕೊರತೆಗಳನ್ನು ನೀಗಿಸಬೇಕು. ಸ್ವಚ್ಛತೆ - ನೈರ್ಮಲ್ಯ, ಮೂಲಸೌಕರ್ಯಗಳನ್ನು ಉತ್ತಮಪಡಿಸಲು ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರ್ಕಾರದ ಹೊಣೆ ಎಂದಿದ್ದಾರೆ.