Fri,Aug12,2022
ಕನ್ನಡ / English

ಕಾರಲ್ಲೇ ಪೆಟ್ರೋಲ್ ಸುರಿದುಕೊಂಡು ಸುಟ್ಟು ಕರಕಲಾದ ಯುವಜೋಡಿ | JANATA NEWS

23 May 2022
691

ಉಡುಪಿ : ಪ್ರೇಮಿಗಳು ಹೆಗ್ಗುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತಾರು ಎಂಬಲ್ಲಿ ಪೆಟ್ರೋಲ್​ ಸುರಿದುಕೊಂಡು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಜ್ಯೋತಿ ಚೋಳನಾಯಕನ ಹಳ್ಳಿ ನಿವಾಸಿಯಾಗಿದ್ದು, ಯಶವಂತ್​ ಮುನಿಯಪ್ಪ ಲೇಔಟ್​ ನಿವಾಸಿ. ಜ್ಯೋತಿ ಒಂದು ವರ್ಷದ ಹಿಂದೆ ಬಿ.ಕಾಂ. ಮುಗಿಸಿದ್ದರು. ಯಶವಂತ್​ ಪದವಿ ಮುಗಿಸಿ ಕಂಪ್ಯೂಟರ್​ ಕೋರ್ಸ್​ ಮಾಡುತ್ತಿದ್ದರು. ಇಂಟರ್​ವ್ಯೂಗೆ ಹೋಗಿ ಬರುವುದಾಗಿ ಹೇಳಿದ್ದ ಜ್ಯೋತಿ ಮರಳಿ ಮನೆಗೆ ಬಾರದ ಕಾರಣ ಪಾಲಕರು ಮೇ 19ರಂದು ಪೊಲೀಸರಿಗೆ ದೂರು ನೀಡಿದ್ದರು. ಯಶವಂತ್​ ಕೂಡ ಟ್ಯಾಲಿ ಕ್ಲಾಸ್​ಗೆಂದು ಹೋಗಿದ್ದು, ಹಿಂತಿರುಗದ ಬಗ್ಗೆ ಹೆತ್ತವರು ಮೇ 21ರಂದು ದೂರು ದಾಖಲಿಸಿದ್ದರು.

ಬೆಂಗಳೂರು ಆರ್.ಟಿ.ನಗರದ 23 ವರ್ಷದ ಯಶವಂತ ಯಾದವ್, ಜ್ಯೋತಿ ಮೃತಪಟ್ಟ ಯುವ ಜೋಡಿಗಳಾಗಿದ್ದಾರೆ. ಮಂಗಳೂರಿಗೆ ಬಂದ ಈ ಜೋಡಿ ನಗರದ ಮಿಲಾಗ್ರಿಸ್​ನ ಕಾರು ರೆಂಟಲ್​ ಸರ್ವೀಸ್​ನಲ್ಲಿ ಒಂದು ದಿನಕ್ಕೆ ಸೆಲ್ಫ್​ ಡ್ರೈವ್​ ಕಾರು ಬುಕ್​ ಮಾಡಿದ್ದರು. ಮಂಗಳೂರಿನ ಬೀಚ್​ಗಳು, ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಬಳಿಕ ಜೋಡಿ ಉಡುಪಿಗೆ ತೆರಳಿತ್ತು. ಮಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿದ್ದರು ಎನ್ನಲಾಗಿದೆ.

5,000 ಪಾವತಿಸಿ ಆಧಾರ್ ಕೊಟ್ಟು ಬಾಡಿಗೆ ಕಾರು ಪಡೆದಿದ್ದರು. ಆಧಾರ್​ ಕಾರ್ಡಿನ ಆಧಾರದಲ್ಲಿ ಅವರ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆತ್ಮಹತ್ಯೆಗೂ ಮುನ್ನ ಯಶವಂತ್​ ಮೊಬೈಲ್​ನಿಂದ ಮನೆಯವರಿಗೆ ಸಂದೇಶ ರವಾನಿಸಿದ್ದ. 'ಹೆತ್ತವರನ್ನು ಬಿಟ್ಟು ಬದುಕಲಾರೆವು. ಪ್ರೀತಿಸಿದಾಕೆಗೂ ಮೋಸ ಮಾಡಲಾರೆ. ನಮಗೆ ಬಾಡಿಗೆ ಮನೆ, ಉದ್ಯೋಗ ಸಿಕ್ಕಿದೆ. ಆದರೂ ನಾವು ಸಂತೋಷವಾಗಿಲ್ಲ. ಹಾಗಾಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ, ಕ್ಷಮಿಸಿ' ಎಂದು ಮೆಸೇಜ್​ ಕಳುಹಿಸಿದ್ದ. ಜತೆಗೆ ತಾವಿದ್ದ ಲೊಕೇಶನ್​ ಮಾಹಿತಿಯನ್ನೂ ಯಶವಂತ್​ ಶೇರ್​ ಮಾಡಿದ್ದ. ಯುವತಿ ಜ್ಯೋತಿಯ ಹೆತ್ತವರಿಗೂ ಯಶವಂತ್​ ಮೊಬೈಲ್​ನಿಂದ ಮೆಸೇಜ್ ಕಳುಹಿಸಲಾಗಿತ್ತು ಎನ್ನಲಾಗಿದೆ.

ಮದುವೆಯ ಫೋಟೋಗಳನ್ನು ಮನೆಯವರಿಗೆ ಕಳುಹಿಸಿದಾಗ ವಿರೋಧ ವ್ಯಕ್ತವಾಗಿತ್ತು. ಇದರಿಂದ ಆತಂಕಕ್ಕೆ ಒಳಗಾದ ಜೋಡಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

RELATED TOPICS:
English summary :Petrol poured in the car and burned

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...