Fri,Apr26,2024
ಕನ್ನಡ / English

ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು | JANATA NEWS

25 May 2022
3571

ಬೆಂಗಳೂರು : ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳುವ ವಿಚಾರ ಸಂಬಂಧ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳಲು ವಿಶ್ವ ಹಿಂದೂ ಪರಿಷತ್ ನಾಯಕರು ಹಾಗೂ ಬಿಜೆಪಿ ಶಾಸಕರು ಮುಂದಾಗಿದ್ದಾರೆ. ಬಿಜೆಪಿ ಸರ್ಕಾರ ಈ ರಾಜ್ಯವನ್ನು ಕೊಲ್ಲುತ್ತಿದೆ.

ಬಿಜೆಪಿಯವರು ತಮ್ಮ ನಂಬಿಕೆ, ಸ್ವಂತ ವಿಚಾರದಲ್ಲಿ ಏನಾದರೂ ಮಾಡಿಕೊಳ್ಳಲಿ. ಅವರ ವೈಯಕ್ತಿಕ ನಂಬಿಕೆ, ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಇದರಿಂದ ರಾಜ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು.

ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಸರ್ಕಾರದಲ್ಲಿ ಅಲ್ಪಸಂಖ್ಯಾತರ ಸಚಿವಾಲಯ, ಹಿಂದೂಗಳಿಗಾಗಿ ಮುಜರಾಯಿ ಇಲಾಖೆ ಇದೆ. ಸರ್ಕಾರಿ ಅಧಿಕಾರಿಗಳು ಇದ್ದಾರೆ. ಹೀಗಾಗಿ ಸರಕಾರದ ವಿಚಾರದಲ್ಲಿ ಸಂಘಟನೆಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕು.

ಇಂತಹ ವಿಚಾರದಲ್ಲಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ನಾವು ಹೋರಾಡುತ್ತೇವೆ ಎಂದು ನನಗೆ ಅನೇಕ ಕರೆಗಳು ಬರುತ್ತಿವೆ. ಇದರಿಂದ ಶಾಂತಿ ಸುವ್ಯವಸ್ಥೆಗೆ ಭಂಗವಾಗುತ್ತದೆ, ಹೀಗಾಗಿ ಈ ವಿಚಾರಕ್ಕೆ ಹೋಗಬೇಡಿ ಎಂದು ನಾನೇ ಸಮಾಧಾನ ಮಾಡುತ್ತಿದ್ದೇನೆ.

ಭವಿಷ್ಯ ಕೇಳುವವರು, ಶಕುನ ಕೇಳುವವರು, ಜ್ಯೋತಿಷ್ಯ ಕೇಳುವವರಿಗೆ ನಾವು ಅಡ್ಡಿ ಮಾಡುವುದಿಲ್ಲ. ಇದೆಲ್ಲವೂ ವೈಯಕ್ತಿಕ ವಿಚಾರವಾಗಿದ್ದು, ಸಾರ್ವಜನಿಕ ವಿಚಾರವಲ್ಲ. ಅನಗತ್ಯ ಗೊಂದಲ ಸೃಷ್ಟಿಸುವುದನ್ನು ನಾನು ಖಂಡಿಸುತ್ತೇನೆ. ಈ ವಿಚಾರದಲ್ಲಿ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದಿದ್ದಾರೆ.

RELATED TOPICS:
English summary :Government propagandists should also be arrested

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...