ಜನರ ಉಳಿವಿಗಾಗಿ 2023ರಲ್ಲಿ ನಾವು ಗೆಲ್ಲಲೇಬೇಕು: ಸಿದ್ದರಾಮಯ್ಯ | JANATA NEWS

02 Jun 2022
344

ಬೆಂಗಳೂರು : 2023ರ ಏಪ್ರಿಲ್‌ - ಮೇ ಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ.

ನನಗಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರಕ್ಕೆ ಈ ಚುನಾವಣೆಯನ್ನು ನಡೆಸಲಾಗಲೀ ಅಥವಾ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಲು ಒಲವಿಲ್ಲ. ಕಾಂಗ್ರೆಸ್ ಗೆ ಮಾತ್ರ ಈ ಬದ್ಧತೆ ಇರುವುದು. ಬಿಜೆಪಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಇಂದು ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಕ್ಕಿಕೊಂಡಿದೆ. 2014-15ರಲ್ಲಿ ಈ ದೇಶದ ಮೇಲಿದ್ದ ಒಟ್ಟು ಸಾಲ 53 ಲಕ್ಷ ಕೋಟಿ ರೂಪಾಯಿ. ಇಂದು ಈ ಸಾಲ 155 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದರು.

ನಾವು ಅಧಿಕಾರಕ್ಕೆ ಬರುವಾಗ ರಾಜ್ಯದ ಜಿಡಿಪಿ 6 ಲಕ್ಷ ಕೋಟಿ ರೂಪಾಯಿಗೆ ಇತ್ತು, ನಾವು ಅಧಿಕಾರದಿಂದ ಇಳಿಯುವಾಗ 14 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. 2020-21ರಲ್ಲಿ -5% ಬೆಳವಣಿಗೆ ಕಂಡಿದೆ. ಇದು ರಾಜ್ಯವನ್ನು ಸಾಲದ ಸುಳಿಗೆ ಸಿಕ್ಕಿಸಿ, ಆರ್ಥಿಕವಾಗಿ ದಿವಾಳಿ ಮಾಡಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ, ಸಿಮೆಂಟ್ ಹೀಗೆ ಎಲ್ಲದರ ಬೆಲೆ ಗಗನಕ್ಕೇರಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತಪ್ಪು ಆರ್ಥಿಕ ನೀತಿ ಮತ್ತು ಅದನ್ನು ರಾಜ್ಯ ಸರ್ಕಾರ ಅನುಸರಿಸುತ್ತಿರುವುದು ಎಂದು ಕಿಡಿಕಾರಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಯುವಕರು, ಮಕ್ಕಳು, ರೈತರು ಸಮಸ್ಯೆಯಲ್ಲಿದ್ದಾರೆ. ಇವುಗಳನ್ನು ಮುಚ್ಚಿಡಲು ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತಂದಿದ್ದಾರೆ. ಇಂದು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಆತಂಕದಲ್ಲಿ ಬದುಕುವಂತಾಗಿದೆ.

ಚರ್ಚ್, ಮಸೀದಿಗಳ ಮೇಲೆ ದಾಳಿ, ಹಿಂದೂಗಳನ್ನು ಅಲ್ಪಸಂಖ್ಯಾತರ ವಿರುದ್ಧ ಎತ್ತಿಕಟ್ಟುವ ಕೆಲಸ ದೇಶದ ಉದ್ದಗಲಕ್ಕೂ ನಡೀತಿದೆ. ಹೀಗಾಗಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ತೆಗೆಯಬೇಕಾಗಿದೆ. ಸಂವಿಧಾನದ ಆಶಯಗಳಲ್ಲಿ ನಂಬಿಕೆ, ಬದ್ಧತೆ ಇಲ್ಲದವರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :We must win in 2023 for the survival of the people: Siddaramaiah

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...