ಪ್ರಸ್ತುತ ಪಠ್ಯ ಪರಿಷ್ಕರಣಾ ಸಮಿತಿ ವಿಸರ್ಜಿಸಿದ ರಾಜ್ಯ ಸರ್ಕಾರ! | JANATA NEWS

04 Jun 2022
380

ಬೆಂಗಳೂರು : ಪ್ರಸ್ತುತ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಿಸರ್ಜತೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ, ಕುವೆಂಪು, ಬಸವಣ್ಣ ಹಾಗೂ ನಾಡಗೀತೆಗೆ ಅಪಮಾನ ಮಾಡಲಾಗಿದೆ ಎನ್ನುವ ಆರೋಪಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವರದಿ ಸಲ್ಲಿಕೆ ಮಾಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ವಿವಾದ ಸಂಬಂಧ ವರದಿ ನೀಡಿದರು. ಬಳಿಕ ಸರಕಾರದ ನಿರ್ಧಾರಗಳ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿರುವ ಅಂಶಗಳ ಮರುಪರಿಶೀಲನೆಗೆ ಮುಕ್ತ ಮನಸ್ಸು ಹೊಂದಿರುವುದಾಗಿ ತಿಳಿಸಲಾಗಿದೆ.

ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ. ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು.

ಈ ಕೆಳಕಂಡ ನಿರ್ದಾರವನ್ನು ಸರ್ಕಾರವು ತೆಗೆದುಕೊಂಡಿದೆ.

1) ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.

2) ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

3) ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.

4) ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ.

5) ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.

6) ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.

ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

RELATED TOPICS:
English summary :State Government dissolved by the current Text Revision Committee

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...