ದೆಹಲಿಯಲ್ಲಿ ಹೈ ಡ್ರಾಮಾ: ಬೃಹತ್ ಮೆರವಣಿಗೆಯೊಂದಿಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್ ಗಾಂಧಿ | JANATA NEWS

ನವದೆಹಲಿ : ಭಾರೀ ಸಂಖ್ಯೆಯ ಪಕ್ಷದ ಕಾರ್ಯಕರ್ತರಿಂದ ಸುತ್ತುವರೆದುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ(ಇಡಿ) ಕಚೇರಿಗೆ ಆಗಮಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ, ಪಕ್ಷದ ಸಂಸದ ರಾಹುಲ್ ಗಾಂಧಿ ಇಬ್ಬರೂ ಇಡಿಯಿಂದ ಸಮನ್ಸ್ ಸ್ವೀಕರಿಸಿದ್ದರು. ಸೋನಿಯಾ ಗಾಂಧಿಗೆ ಕೋವಿಡ್ 19 ಸೋಂಕು ತಗುಲಿರುವುದರಿಂದ ರಾಹುಲ್ ಗಾಂಧಿ ಮಾತ್ರ ಇಂದು ಇಡಿ ಕಚೇರಿಗೆ ಆಗಮಿಸಿದ್ದರು. ಪಿಎಂಎಲ್ಎ ಪ್ರಕರಣದಲ್ಲಿ ವಿಚಾರಣೆಗೆ ಜೂನ್ 23 ರಂದು ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಡಿ ಹೊಸ ಸಮನ್ಸ್ ಜಾರಿ ಮಾಡಿದೆ.
ನಿನ್ನೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿ, ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ. ಸೋನಿಯಾ ಗಾಂಧಿ ಅವರನ್ನು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನಿಗಾ ಇಡಲಾಗುವುದು, ಎಂದಿದ್ದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುವ ಮೂಲಕ ಆಗಮಿಸಿದರು.
ಇದರ ಬೆನ್ನಲ್ಲೇ, ದೆಹಲಿ ಕೇಂದ್ರ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಮ್ಮಲೀ ಸತ್ಯತೇ ಇದ್ದಾರೆ, ಭಯವೇಕೆ? ಎಂದು ಬಿಜೆಪಿ ಕಾಂಗ್ರೆಸ್ ನಡವಳಿಕೆಯನ್ನು ತರಾಟೆ ತೆಗೆದುಕೊಂಡಿದೆ.