ಹಾಸ್ಟೆಲ್ನಲ್ಲಿ 9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ, ಕಾರಣ ಏನು ಗೊತ್ತಾ? | JANATA NEWS

ಮಂಗಳೂರು : 14 ವರ್ಷದ ವಿದ್ಯಾರ್ಥಿ ಹಾಸ್ಟೆಲ್ನವರು ಮನೆಗೆ ಫೋನ್ ಕರೆ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ (14) ಆತ್ಮಹತ್ಯೆಗೈದ ವಿದ್ಯಾರ್ಥಿ.
ಜೂ.11ರಂದು ಈತನ ತಾಯಿಯ ಹುಟ್ಟಿದ ದಿನ ಇತ್ತು. ಅದಕ್ಕಾಗಿ ತಾಯಿ ಜತೆ ಮಾತನಾಡಲು ಮೊಬೈಲ್ ಕೇಳಿದಾಗ ಹಾಸ್ಟೆಲ್ ವಾರ್ಡನ್, ಶಾಲಾ ಆಡಳಿತ ಮಂಡಳಿ ನಿಯಮ ಪ್ರಕಾರ ಮೊಬೈಲ್ ನೀಡುವುದಿಲ್ಲ ಎಂದು ಹೇಳಿ ತಿರಸ್ಕರಿಸಿದ್ದರು. ಇದರಿಂದ ಮನನೊಂದ ಬಾಲಕ ಪೂರ್ವಜ್ ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.