ಕೇಂದ್ರ ಸರ್ಕಾರದಿಂದ ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೌಕರರ ನೇಮಕಾತಿ : ಪ್ರಧಾನಿ ಮೋದಿ ಆದೇಶ | JANATA NEWS

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ವಿವಿಧ ಸರ್ಕಾರಿ ಇಲಾಖೆಗಳಿಗೆ ನೇಮಕ ಮಾಡಿಕೊಳ್ಳಲಿದೆ.
ಮುಂದಿನ ಒಂದೂವರೆ ವರ್ಷದಲ್ಲಿ "ಮಿಷನ್ ಮೋಡ್" ನಲ್ಲಿ 10 ಲಕ್ಷ ಜನರ ನೇಮಕಾತಿಯನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ತಿಳಿಸಿದ್ದಾರೆ, ಎಂದು ಪ್ರಧಾನ ಮಂತ್ರಿ ಕಚೇರಿಯಿಂದ ಪ್ರಕಟಣೆ ಬಂದಿದೆ.
ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ ನಂತರ ಪ್ರಧಾನಿ ಮೋದಿಯವರ ನಿರ್ದೇಶನ ಬಂದಿದೆ, ಎಂದು ಪ್ರಧಾನ ಮಂತ್ರಿ ಕಚೇರಿ ಅಥವಾ ಪಿಎಂಒ ತಿಳಿಸಿದೆ.
ವಿವಿಧ ಸರ್ಕಾರಿ ವಲಯಗಳಲ್ಲಿ ಖಾಲಿ ಇರುವ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಈ ನೇಮಕಾತಿ ಅಭಿಯಾನದಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.