ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ! | JANATA NEWS
ಬೆಂಗಳೂರು : ಬೆಂಗಳೂರಿನ 2 ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ.
ಮಕ್ಕಳಿಗೆ, ಪೋಷಕರಿಗೆ ಪ್ರತ್ಯೇಕ ಮುಂಜಾಗ್ರತಾ ಕ್ರಮಗಳು ಹಾಗೂ ವಿದ್ಯಾಸಂಸ್ಥೆಗಳಿಗೆ ಮಾರ್ಗಸೂಚಿ ಪ್ರಕಟಿಸಿರೋ ಬಿಬಿಎಂಪಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಸಲಹೆ ನೀಡಿದೆ.
ಕೊವಿಡ್ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಫಲಿತಾಂಶ ಬರುವವರೆಗೂ ಮಕ್ಕಳ್ಳನ್ನು ಪ್ರತ್ಯೇಕವಾಗಿ ಇರಿಸಬೇಕು. ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಪಾಲನೆ ಮಾಡಬೇಕು. ಶಾಲೆಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಬೇಕು.
ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿರುವುದು, ಸಾಮಾಜಿಕ ಅಂತರ ಕಾಪಾಡುವುದು ಖಚಿತಪಡಿಸಿಕೊಳ್ಳಬೇಕು.ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುಬೇಕು.
ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಂಸ್ಥೆಯ ಸಿಬ್ಬಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುಬೇಕು.
ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕರು, ಸಾರ್ವಜನಿಕರು ಪಾಲಿಕೆ ಸೂಚಿಸುವ ಈ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.