ರಾಹುಲ್ ವಿಚಾರಣೆ ವಿರೋಧಿಸಿ ರಾಜಭವನಕ್ಕೆ ಕಾಂಗ್ರೆಸ್ ಮುತ್ತಿಗೆ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶ! | JANATA NEWS

ಬೆಂಗಳೂರು : ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಮುಂದಾಗಿದ್ದಾಗ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಈ ವೇಳೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
