ನಾಳೆ ದ್ವಿತೀಯ ಪಿಯುಸಿ ಫಲಿತಾಂಶ | JANATA NEWS

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ನಲ್ಲಿ ಸುದ್ದಿಗೋಷ್ಠಿ ನಡೆಸಲಿರೋ ಸಚಿವ ನಾಗೇಶ್ ಅವರು, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನೋಂದಣಿಗೊಂಡ ವಿದ್ಯಾರ್ಥಿಗಳ ಮೊಬೈಲ್ಗೆ ಫಲಿತಾಂಶದ ಸಂದೇಶ ರವಾನೆಯಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.
RELATED TOPICS:
English summary :Tomorrows secondary PUC result