ಕುಜ ದೋಷವೆಂದು ಮದುವೆಗೆ ನಿರಾಕರಿಸಿದ ಪ್ರೇಮಿ, ಲೇಡಿ ಕಾನ್ಸ್‌ಟೇಬಲ್ ವಿಷ ಕುಡಿದು ಆತ್ಮಹತ್ಯೆ | JANATA NEWS

17 Jun 2022
379

ಶಿವಮೊಗ್ಗ : ಪ್ರೀತಿಸಿದ ಹುಡುಗ ಜಾತಕದಲ್ಲಿ ಕುಜ ದೋಷವಿದೆಯೆಂದು ಮದುವೆಗೆ ನಿರಾಕರಿಸಿದ ಅಂತ ಲೇಡಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿ ಸುಧಾ ಎಂಬುವರೇ ಆತ್ಮಹತ್ಯೆಗೆ ಶರಣಾದ ಲೇಡಿ ಪೊಲೀಸ್ ಕಾನ್ಸ್‌ಟೇಬಲ್. ಇವರು ತೀರ್ಥಹಳ್ಳಿ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸುಧಾ ಮತ್ತು ಅರಣ್ಯ ಇಲಾಖೆಯಲ್ಲಿ ಆರ್​ಎಫ್ಒ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರವೀಣ್ ಮೊಕಾಶಿ ಪರಸ್ಪರ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರವೀಣ್ ಅವರು ಸುಧಾ ಅವರ ಜಾತಕವನ್ನು ತನ್ನ ತಾಯಿಗೆ ತೋರಿಸಿದ್ದಾರೆ. ಜಾತಕದಲ್ಲಿ ಕುಜ ದೋಷವಿರುವ ಕಾರಣ ಅವಳನ್ನು ಸೊಸೆಯಾಗಿ ಸ್ವೀಕರಿಸುವುದಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು. ಅಲ್ಲದೇ ಸುಧಾಳಿಗೂ ಫೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು. ಈ ಮದುವೆ ಮಾಡಲು ಸಾಧ್ಯವಿಲ್ಲ ಎಂದಿದ್ದರು ಎನ್ನಲಾಗಿದೆ.

ಇದರಿಂದ ಪ್ರವೀಣ್ ಸುಧಾಳನ್ನು ದೂರ ಮಾಡುತ್ತಿದ್ದ. ಆದರೆ, ಸುಧಾ ನಾವಿಬ್ಬರು ಅದಷ್ಟು ಬೇಗ ಮದುವೆಯಾಗೋಣ ಎಂದು ಪ್ರವೀಣ್​ರಲ್ಲಿ ಒತ್ತಾಯ ಮಾಡುತ್ತಿದ್ದರು. ಪ್ರೇಮಿಗಳು ಮೇ 31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಇಬ್ಬರು ಬೈಕ್​ನಲ್ಲಿ ಭದ್ರಾವತಿಯ ಎಪಿಎಂಸಿ ಬಳಿ ಬಂದು ಮೊದಲು ನೀನು ವಿಷ ಕುಡಿ, ನಂತರ ನಾನು ವಿಷ ಕುಡಿಯುತ್ತೇನೆ ಎಂದು ಹೇಳಿ ಪ್ರವೀಣ್ ನಾಟಕವಾಡಿದ್ದಾರೆ. ಆದರೆ, ಅಸಲಿಗೆ ಪ್ರವೀಣ್​ ವಿಷ ಸೇವಿಸಿರಲಿಲ್ಲ ಎನ್ನಲಾಗಿದೆ.

ಇಬ್ಬರೂ ತೀವ್ರ ಅಸ್ವಸ್ಥರಾಗಿದ್ದರು. ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ನಿನ್ನೆ ಮಧ್ಯೆ ರಾತ್ರಿ‌ ಆಸ್ಪತ್ರೆಯಲ್ಲಿ ಸುಧಾ ಮೃತಪಟ್ಟಿದ್ದಾಳೆ. ಸದ್ಯ ಯುವಕ ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಅಂತ ಹೇಳಲಾಗ್ತಿದೆ.

RELATED TOPICS:
English summary :Lady Constable drinks suicide after lover refuses marriage

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...