ಸದುದ್ದೇಶದಿಂದ ಮಾಡಿದ ಅನೇಕ ಕೆಲಸಗಳು, ರಾಜಕೀಯದ ಬಣ್ಣದಿಂದ ಹಾಳಾಗುತ್ತಿದೆ - ಪ್ರಧಾನಿ ಮೋದಿ | JANATA NEWS

19 Jun 2022
428

ನವದೆಹಲಿ : ಕೇಂದ್ರ ಸರ್ಕಾರವು ಉತ್ತಮ ಉದ್ದೇಶದಿಂದ ಮಾಡಿದ ಅನೇಕ ಕೆಲಸಗಳು ರಾಜಕೀಯದ ಬಣ್ಣಕ್ಕೆ ಸಿಲುಕುತ್ತಿವೆ, ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಿಷಾದ ವ್ಯಕ್ತಪಡಿಸಿದ್ದಾರೆ.

"ಸದುದ್ದೇಶದಿಂದ ಮಾಡಿದ ಅನೇಕ ಕೆಲಸಗಳು, ರಾಜಕೀಯದ ಬಣ್ಣದಿಂದ ಸಿಲುಕಿ ಕೊಳ್ಳುತ್ತಿರುವುದು ನಮ್ಮ ದೇಶದ ದೌರ್ಭಾಗ್ಯ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೇಂದ್ರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯನ್ನು ವಿರೋಧಿಸಿ ದೇಶಾದ ಅನೇಕ ರಾಜ್ಯಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಬಂದಿದೆ.

ಪ್ರಗತಿ ಮೈದಾನದ ಮುಖ್ಯ ಸುರಂಗ ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ಪ್ರತಿಭಟನೆಗಳ ಬಗ್ಗೆ ಪ್ರಸ್ತಾಪಿಸದೆ ಈ ಕುರಿತು ವಿಷಾದ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಪ್ರಗತಿ ಮೈದಾನ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮತ್ತು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದರು.

ದೆಹಲಿ-ಎನ್‌ಸಿಆರ್‌ನ ಸಮಸ್ಯೆಗಳನ್ನು ಪರಿಹರಿಸಲು ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಿಸಿದ ಪ್ರಧಾನಿ ಮೋದಿ, ಕಳೆದ ಎಂಟು ವರ್ಷಗಳಲ್ಲಿ ಮೆಟ್ರೋ ಸೇವೆಯು 193 ಕಿ.ಮೀ ನಿಂದ 400 ಕಿ.ಮೀಗೆ ಏರಿದೆ ಎಂದು ಹೇಳಿದರು.

"ಭಾರತೀಯ ಸಂಪ್ರದಾಯವನ್ನು ಪ್ರದರ್ಶಿಸಲು ದಶಕಗಳ ಹಿಂದೆ ರೂಪುಗೊಂಡ ಪ್ರಗತಿ ಮೈದಾನದ ಹೆಚ್ಚು "ಪ್ರಗತಿ" ಆಗಿರಲಿಲ್ಲ ... ಅದನ್ನು ಕೈಬಿಡಲಾಯಿತು ... ಕಾಗದದ ಮೇಲೆ ಅಭಿವೃದ್ಧಿ ಯೋಜನೆ ಇತ್ತು. (ನಂತರ ಸರ್ಕಾರ) ಅದನ್ನು ಪತ್ರಿಕೆಗಳ ಮುಖ್ಯಾಂಶಗಳಲ್ಲಿ ಮಾಡಲು ತೋರಿಕೆಯಲ್ಲಿ ಘೋಷಣೆಗಳನ್ನು ಮಾಡಿತು ಮತ್ತು ನಂತರ ಬೇರೆ ಕಾರ್ಯದಲ್ಲಿ ನಿರತವಾಯಿತು,” ಎಂದು ಐಟಿಪಿಓ ಸುರಂಗದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಹೇಳಿದರು.

ನಂತರ ಮಾತನಾಡಿದ ಅವರು, ನನಗೆ ಕಳೆದ ವರ್ಷವೂ ರಕ್ಷಣಾ ಸಂಕೀರ್ಣವನ್ನು ಉದ್ಘಾಟಿಸುವ ಅವಕಾಶ ಸಿಕ್ಕಿತ್ತು, "ಆದರೆ ಅನೇಕ ಒಳ್ಳೆಯ ಕೆಲಸಗಳು, ಒಳ್ಳೆಯ ಉದ್ದೇಶದಿಂದ ಮಾಡಿದ ಕೆಲಸಗಳು, ರಾಜಕೀಯದ ಬಣ್ಣಕ್ಕೆ ತುತ್ತಾಗುತ್ತಿರುವುದು ನಮ್ಮ ದೇಶದ ದೌರ್ಭಾಗ್ಯ" ಎಂದು ವಿಷಾದ ವ್ಯಕ್ತಪಡಿಸಿದರು.

RELATED TOPICS:
English summary : Many things done with good intentions are getting struck in color of politics - PM Modi

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...