Thu,Apr25,2024
ಕನ್ನಡ / English

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ | JANATA NEWS

22 Jun 2022
4306

ಬೆಂಗಳೂರು : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ವಿದೇಶಿ ಮಹಿಳೆಯರು ನಮ್ಮ ದೇಶಕ್ಕೆ ಬಂದು ಕಂಪನಿ ಸ್ಥಾಪಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ರಾಜ್ಯದ ಸ್ತ್ರೀಶಕ್ತಿ ಕೂಡ ಸಬಲೀಕರಣ ಆಗಬೇಕು. ಹೇಗೆ ವಿದೇಶದ ವಸ್ತುಗಳು ಇಲ್ಲಿ ಮಾರಾಟವಾಗುತ್ತಿವೆಯೋ ಆ ರೀತಿ ಇಲ್ಲಿನ ಸ್ತ್ರೀಶಕ್ತಿ ಸಂಘಟನೆಗಳಿಂದ ತಯಾರಾಗುವ ವಸ್ತುಗಳು ವಿದೇಶದಲ್ಲಿ ಮಾರಾಟವಾಗಬೇಕು. ಆಗ ನಮ್ಮ ಆರ್ಥಿಕತೆಗೆ ಬಹಳ ದೊಡ್ಡ ಶಕ್ತಿ ಬರಲಿದೆ ಎಂದರು.

ಸ್ತ್ರೀಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಪ್ರಥಮ ಬಾರಿ ಆಯವ್ಯಯದಲ್ಲಿ 1.5 ಲಕ್ಷ ರೂ.ಗಳ ಆರ್ಥಿಕ ನೆರವು, ಬ್ಯಾಂಕ್ ಜೋಡಣೆ, ಯಂತ್ರೋಪಕರಣ, ಪ್ರಾಜೆಕ್ಟ್‌ಗಳು, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಅಮೆಜಾನ್ ನಂತಹ ಆನ್‍ಲೈನ್ ವೇದಿಕೆಗಳಲ್ಲಿ ಈ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗುವುದು. ಪ್ರಾಯೋಗಿಕವಾಗಿ ಎಲಿವೇಟ್ ಕಾರ್ಯಕ್ರಮ ಪ್ರಾರಂಭಿಸಿದ್ದು, ಒಂದು ಸ್ತ್ರೀಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ರೂ. ವಹಿವಾಟನ್ನು ಮಾಡುತ್ತಿದೆ. ಇದು ಸಂಘಟಿತವಾದ ಶ್ರಮದ ಶಕ್ತಿ ಎಂದು ತಿಳಿಸಿದರು.

ಮಹಿಳೆಯರಿಗೆ ಯೋಗ್ಯವಾಗಿರುವ ಗೌರವ ಮತ್ತು ಸ್ಥಾನ ಇನ್ನೂ ಸಿಕ್ಕಿಲ್ಲ. ಅವರ ದುಡಿಮೆಗೆ ನಾವು ಬೆಲೆ ಕೊಟ್ಟಾಗ ಮಾತ್ರ ಅವರಿಗೆ ಆ ಸ್ಥಾನ ಸಿಗಲಿದೆ. ಅವರ ದುಡಿಮೆಗೆ ಎಲ್ಲಿಯವರೆಗೆ ಬೆಲೆ ಇರುವುದಿಲ್ಲವೋ ಅಲ್ಲಿಯವರೆಗೂ ಅವರು ಸ್ವಾವಲಂಬಿಯಾಗಿರುವುದಿಲ್ಲ. ಹೀಗಾಗಿ ಅವರಿಗೆ ಕಾರ್ಮಿಕ ಸ್ವಾತಂತ್ರ್ಯ ಬಂದಾಗ ಖಂಡಿತವಾಗಿ ಸಾಮಾಜಿಕ, ಶೈಕ್ಷಣಿಕ ಎಲ್ಲಾ ಸ್ವಾತಂತ್ರ್ಯಗಳು ಮಹಿಳೆಯರಿಗೆ ಲಭಿಸಲಿವೆ. ಈ ಹಿನ್ನೆಲೆ ಸೇವಾ ಸಂಸ್ಥೆಗಳು ದೊಡ್ಡ ಪಾತ್ರವಹಿಸಬೇಕು ಎಂದು ಕರೆ ನೀಡಿದರು.

RELATED TOPICS:
English summary :Financial Assistance Scheme for Women Power Societies

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...