Sat,May18,2024
ಕನ್ನಡ / English

ಉದಯಪುರ್ ಹತ್ಯೆ, ಅಮಾನವೀಯ ಮತ್ತು ಹೇಯ ಕೃತ್ಯ! | JANATA NEWS

30 Jun 2022
4014

ಬೆಂಗಳೂರು : ಉದಯ್​ಪುರದಲ್ಲಿ ನಡೆದ ಭೀಕರ ಹತ್ಯೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಯಿಸಿ ಅಮಾನವೀಯ ಮತ್ತು ಹೇಯ ಕೃತ್ಯ ಎಂದಿದ್ದಾರೆ.

ಉದಯ್​ಪುರದಲ್ಲಿ ನಡೆದಿರುವ ಪ್ರಕರಣ ಅಮಾನವೀಯ ಮತ್ತು ಅತ್ಯಂತ ಹೇಯ ಕೃತ್ಯವಾಗಿದೆ. ಇದು ಭಯೋತ್ಪಾದಕರ ಚಟುವಟಿಕೆಯಾಗಿದ್ದು, ಅದರ ಹಿಂದೆ ಬಹಳ ದೊಡ್ಡ ಅಂತಾರಾಷ್ಟ್ರೀಯ ಷಡ್ಯಂತ್ರವಿದೆ ಎಂದಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆಯಾಗಬೇಕು ಮತ್ತು ಕೃತ್ಯದಲ್ಲಿ ಭಾಗಿಯಾದವರನ್ನು ಗಲ್ಲಿಗೇರಿಸಬೇಕು ಎಂದರು.

ಉದಯ್​ಪುರ ಘಟನೆ ಕುರಿತು ರಾಜಸ್ಥಾನ ಸರ್ಕಾರ ಕೂಡಲೇ ಎಲ್ಲ ರೀತಿಯ ಕ್ರಮಗಳನ್ನು ಜರುಗಿಸಬೇಕು. ಅದರ ಸಂಪೂರ್ಣ ತನಿಖೆ ಮಾಡಬೇಕು. ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಹಂತಕರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆಗಳು ಎಲ್ಲವೂ ಇವೆ. ಹೀಗಾಗಿ ಸಮಗ್ರ ತನಿಖೆಯ ಅಗತ್ಯವಿದೆ ಎಂದರು.

ಕಮಿಷನ್ ಆರೋಪ ವಿಚಾರಕ್ಕೆ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಕೇಂದ್ರ ಗೃಹ ಇಲಾಖೆಯಿಂದ ದಾಖಲೆ ಕೇಳಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ನಮಗೆ ಯಾವ ಸೂಚನೆಯೂ ಬಂದಿಲ್ಲ. ಅವರ ಸಂಘಕ್ಕೆ ಸೂಚನೆ ಬಂದಿದ್ದರೆ ದಾಖಲೆ ಕೊಡಲಿ. ಪ್ರಧಾನಿಗಳ ನಿರ್ದೇಶನ ಮೇರೆಗೆ ತನಿಖೆ ಮಾಡುತ್ತೇವೆ ಎಂದರು.

ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದಿರುವ ವಿಚಾರವಾಗಿ ಮಾತನಾಡಿದ ಸಿಎಂ, ಅದು ಕಾಂಗ್ರೆಸ್ ನವರ ಆಂತರಿಕ ಸಮೀಕ್ಷೆ. ಅವರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದೇ ಹೇಳಬೇಕು. ಇನ್ನೇನು ಬಿಜೆಪಿ ಅಧಿಕಾರಕ್ಕೆ ಬರುತ್ತದೆಂದು ಹೇಳ್ತಾರಾ ಅವರು ಎಂದು ವ್ಯಂಗ್ಯವಾಡಿದರು

RELATED TOPICS:
English summary :Udaipur killing, inhuman and despicable act!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...