Fri,Aug12,2022
ಕನ್ನಡ / English

ದೇವೇಗೌಡರು ನಾಲ್ಕರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ: ರಾಜಣ್ಣ ವಿವಾದಾತ್ಮಕ ಹೇಳಿಕೆ | JANATA NEWS

01 Jul 2022
622

ತುಮಕೂರು : ಮಾಜಿ ಪ್ರಧಾನಿ ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲೇ ಇದೆ ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇವೇಗೌಡರು ಈಗ ಇಬ್ಬರ ಹೆಗಲ ಮೇಲೆ ಕೈ ಹಾಕಿ ನಡೆಯುತ್ತಿದ್ದಾರೆ. ಇನ್ನು ನಾಲ್ವರ ಮೇಲೆ ಹೋಗುವ ಸಮಯ ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ನಾಯಕ ಕೆ. ಎನ್. ರಾಜಣ್ಣ ಲೇವಡಿ ಮಾಡಿದ್ದಾರೆ.

ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು.. ಎಂದು ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕಾವಣದಾಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೆಡಿಎಸ್ ವರಿಷ್ಠ ದೇವೇಗೌಡರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ಈ ಹೇಳಿಕೆ ವಿಡಿಯೋಗಳು ವೈರಲ್ ಆಗಿವೆ.

ಇದೇ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆ. ಎನ್. ರಾಜಣ್ಣ, ಇದು ನನ್ನ‌ ಕೊನೆಯ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಎಂಎಲ್ಎ ಆದ್ರೆ ನೀವೆಲ್ಲಾ ಎಂಎಲ್ಎ ಇದ್ದಂಗೆ. ನೀವು ಹೋರಾಟ ಮಾಡಿ ನಾನು ಎಂಎಲ್ಎ ಆದ್ರೆ ನಾನು ಸುಮ್ಮನೆ ನಾಮಕಾವಸ್ಥೆಗೆ ಇರ್ತೀನಿ. ಏನಾದ್ರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ನಿಮಗೆ ಬರುತ್ತೆ ಎಂದು ಕೆ. ಎನ್. ರಾಜಣ್ಣ ಹೇಳಿದರು.

ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ವೋಟ್ ಕೇಳ್ತೀನಿ. ಇದು ನನ್ನ ಕೊನೆ ಎಲೆಕ್ಷನ್, ಮುಂದೆ ನೀವು ನಿಂತ್ಕೋ ಅಂದ್ರೂ ನಾನು ನಿಲ್ಲಲ್ಲ. ನನಗೆ ಆಗಲೇ 72 ವರ್ಷ, 77 ಆದ್ರೆ ಕೈ ಕಾಲು ಅಲಾಡ್ತಿರುತ್ತೆ. ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ ಎಂದ ಕೆ. ಎನ್. ರಾಜಣ್ಣ, ಇದೇ ಮಾತಿನ ಭರದಲ್ಲಿ ‘ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ’ ಎಂದು ಹೇಳಿ ಭುಜದ ಮೇಲೆ ಕೈ ಹಾಕೋ ರೀತಿ ತೋರಿಸಿದ ಕೆ. ಎನ್. ರಾಜಣ್ಣ, ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

RELATED TOPICS:
English summary : Controversial Statement Against Jds Supremo Hd Devegowda

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...