Fri,Aug12,2022
ಕನ್ನಡ / English

ವೈದ್ಯನ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿ 1.16 ಕೋಟಿ ರೂ. ವಂಚನೆ | JANATA NEWS

01 Jul 2022
623

ಬೆಂಗಳೂರು : ಖಾಸಗಿ ಕಾಲೇಜಿನಲ್ಲಿ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ವೈದ್ಯನನ್ನು ನಂಬಿಸಿ 1.16 ಕೋಟಿ ರೂ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯ ಅಳಂದದಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ ಶಂಕರ್ ಬಾಬುರಾವ್ ತಮ್ಮ ಮಗನಿಗೆ ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವ ಆಸೆ ಹೊಂದಿದ್ದರು. ಹಲವು ಸಲ ಬೆಂಗಳೂರಿಗೆ ತಿರುಗಾಡಿದರೂ ಸೀಟು ಸಿಕ್ಕಿರಲಿಲ್ಲ. ಈ ಸಂದರ್ಭದಲ್ಲಿ ಎಂಟು ವರ್ಷಗಳಿಂದ‌ ಪರಿಚಿತನಾಗಿದ್ದ ನಾಗರಾಜ್‌ ತನಗೆ ಮೆಡಿಕಲ್​ ಕಾಲೇಜೊಂದರಲ್ಲಿ ಪರಿಚಯಸ್ಥರಿದ್ದಾರೆ, ಅಲ್ಲಿ ಮಗನಿಗೆ ಸೀಟು ಕೊಡಿಸುತ್ತೇನೆ‌‌ ಎಂದು ಭರವಸೆ ಕೊಟ್ಟಿದ್ದಾನೆ.

ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ತಮ್ಮ ಮಗನಿಗೆ ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ 66 ಲಕ್ಷ ರೂ. ಹಣವನ್ನು ನಾಗರಾಜ್ ಪಡೆದಿದ್ದ. ಹಂತ ಹಂತವಾಗಿ 1.16 ಕೋಟಿ ರೂ. ಹಣ ಪಡೆದಿದ್ದ.

ಒಂದು ವರ್ಷವಾದರೂ ಶಂಕರ್ ಬಾಬುರಾವ್ ಅವರ ಪುತ್ರನಿಗೆ ಮೆಡಿಕಲ್ ಸೀಟು ಕೊಡಿಸಲಾಗಲಿಲ್ಲ. ತನ್ನ ಹಣ ವಾಪಸು ನೀಡುವಂತೆ ಶಂಕರ್ ಸ್ನೇಹಿತ ನಾಗರಾಜ್‌ಗೆ ಬೇಡಿಕೆ ಇಟ್ಟಿದ್ದ. ಕೆಲ ದಿನಗಳ ಹಿಂದೆ ಹಣ ವಾಪಸು ಕೊಡುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿಕೊಂಡಿದ್ದ.

ಗಾಂಧಿನಗರದ ಲಾಡ್ಜ್​ನಲ್ಲಿ‌ ಶಂಕರ್ ರೂಮ್ ಬುಕ್‌ ಮಾಡಿ, ನಂತರ ಮಹಾರಾಷ್ಟ್ರ ಮೂಲದ‌ ಲೈಂಗಿಕ ಕಾರ್ಯಕರ್ತೆಯರನ್ನು ರೂಮ್​ಗೆ ಕಳುಹಿಸಿ, ಅವರು ಫೋಟೊ ಕ್ಲಿಕ್ಕಿಸಿಕೊಳ್ಳುವಂತೆ ಮಾಡಿ ಹನಿಟ್ರ್ಯಾಪ್​ ಯತ್ನ ಮಾಡಿದ್ದಾನೆ.

ಅಷ್ಟೇ ಅಲ್ಲ, ಮಧ್ಯರಾತ್ರಿ ಪೊಲೀಸರ ವೇಷದಲ್ಲಿ ಕೆಲವರು ಎಂಟ್ರಿ ಕೊಟ್ಟಿದ್ದಾರೆ. ವೇಶ್ಯಾವಾಟಿಕೆ ಜಾಲ ನಡೆಸುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ ಎಂದು ಶಂಕರ್‌ಗೆ ಬೆದರಿಸಿದ್ದಾರೆ. ಬಳಿಕ ಶಂಕರ್ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಈ ಸಂಬಂಧ ಪೊಲೀಸ್​ ಪ್ರಕರಣ ದಾಖಲಾಗದಿರಲು 50 ಲಕ್ಷ ರೂ. ನೀಡುವಂತೆ ಆರೋಪಿಗಳು ಶಂಕರ್​ ಅವರಿಗೆ ಬೇಡಿಕೆ ಇಟ್ಟಿದ್ದಾರೆ.

ಹಣ ನೀಡದೆ ಹೋದರೆ ನಿನ್ನನ್ನು ಬಂಧಿಸುತ್ತಾರೆ, ಆಗ ನಿನ್ನ ಮಾನ-ಮರ್ಯಾದೆ ಹೋಗಲಿದೆ ಎಂದು ನಾಗರಾಜ್​ ಬೆದರಿಸಿದ್ದಾನೆ. ಇದಕ್ಕೆ ಅಂಜಿದ‌ ಶಂಕರ್ ಊರಿಗೆ ಹೋಗಿ ಹಣ ನೀಡುವುದಾಗಿ ಒಪ್ಪಿಕೊಂಡು, ಕಲಬುರಗಿಗೆ ಬಂದು ಖಾಸಗಿ ಬ್ಯಾಂಕ್​ನಲ್ಲಿ 50 ಲಕ್ಷ ರೂ. ಸಾಲ ಪಡೆದು ಆರೋಪಿಗಳ ಕೈಗೆ ತಂದಿಟ್ಟಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇಷ್ಟಕ್ಕೆ ಸುಮ್ಮನಾಗದ ವಂಚಕ ನಾಗರಾಜ್ ಮತ್ತು ಟೀಂ, ನಿಮ್ಮ ಕೇಸಿನಲ್ಲಿ ಜೈಲಿಗೆ ಹೋಗಿರುವ ಇಬ್ಬರು ಹುಡುಗಿಯರಿಗೆ ಜಾಮೀನು ಕೊಡಿಸಲು 20 ಲಕ್ಷ ರೂ. ಬೇಕಾಗಿದೆ. ಈ ಕೂಡಲೆ ನೀವು ಕೊಡದಿದ್ದರೆ, ಅವರು ನೀವು ಸಿಕ್ಕಿಬಿದ್ದಿರುವ ವಿಚಾರವನ್ನು ಬಹಿರಂಗ ಮಾಡಲಿದ್ದಾರೆ ಎಂದು ನಾಗರಾಜ್ ಪುನಃ ಹೆದರಿಸಿದ್ದಾನೆ. ತಾನು ಮೋಸ ಹೋಗಿರುವ ವಿಚಾರ ತಿಳಿದ ವೈದ್ಯ ಶಂಕರ್ ಆ ಬಳಿಕ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕಲಬುರಗಿಯ ಆಳಂದ ಮೂಲದ ವೈದ್ಯ ಶಂಕರ್ ಬಾಬುರಾವ್ ನೀಡಿದ ದೂರಿನ ಮೇರೆಗೆ ವಂಚಕರಾದ ನಾಗರಾಜ್, ಮಲ್ಲಿಕಾರ್ಜುನ್, ಮಧು, ಬಸವರಾಜ್ ಹಾಗೂ ಹಮೀದ್​ ಎಂಬುವವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

RELATED TOPICS:
English summary :1.16 crores for the doctors son, believing that he would get an MBBS seat. Fraud

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...