Fri,Aug12,2022
ಕನ್ನಡ / English

ಉತ್ತರಕನ್ನಡ ಹಲವು ಭಾಗಗಳಲ್ಲಿ ಶನಿವಾರ ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆ : ಜನ ಜೀವನ ಅಸ್ತವ್ಯಸ್ತ | JANATA NEWS

16 Jul 2022
558

ಕಾರವಾರ : ಉತ್ತರಕನ್ನಡ ಜಿಲ್ಲೆಯ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶನಿವಾರ ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕೆಲವು ಕಡೆ ಜನಜೀವನದ ಮೇಲೆ ಪರಿಣಾಮ ಬೀರಿದೆ.

ಹೊನ್ನಾವರದ ಗುಂಡಬಾಳ ನದಿಗೆ ಪ್ರವಾಹ ಬಂದಿದೆ. ಸ್ಥಳಕ್ಕೆ ಎಸ್.ಡಿ.ಆರ್.ಎಫ್ ತಂಡ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಅಪಾಯದಲ್ಲಿದ್ದ 32 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಹೊನ್ನಾವರದ ಚಿಕ್ಕನಕೋಡ, ಕೆಕ್ಕಾರ ಮತ್ತು ಹೊಸಾಕುಳಿ ಗ್ರಾಮಗಳು ಜಲಾವೃತವಾಗುವ ಭೀತಿ ಎದುರಿಸುತ್ತಿದೆ. ಈಗಾಗಲೇ ಈ ಗ್ರಾಮಗಳ 68 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಕಾರವಾರದ ಹಬ್ಬುವಾಡಾ, ಕೆಎಚ್‌ಬಿ ಸೇರಿದಂತೆ ಹಲವು ಕಡೆ ರಸ್ತೆಯ ಮೇಲೆ ನೀರು ನಿಂತು ಜನ ಪರದಾಡುವಂತಾಗಿದೆ. ಜಿಲ್ಲೆಯ ಭಟ್ಕಳ ಸೇರಿದಂತೆ ಕೆಲ ತಾಲೂಕುಗಳಲ್ಲಿಯೂ ಸಹ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.

ಸುಪಾ, ಬೊಮ್ಮನಹಳ್ಳಿ, ತಟ್ಟಿಹಳ್ಳ, ಕೊಡಸಳ್ಳಿ ಹಾಗೂ ಕದ್ರಾ ಜಲಾಶಯಗಳ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯಗಳಿಗೆ ಒಳ ಹರಿವು ಸಹ ಹೆಚ್ಚಿದೆ. ಕದ್ರಾ ಜಲಾಶಯದ ಒಳಹರಿವು ಸಹ ಹೆಚ್ಚಿದ್ದು, ಹೀಗಾಗಿ ಜಲಾಶಯದ ಹೊರ ಹರಿವನ್ನೂ ಸಹ ಅದೇ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಜಲಾಶಯದ ಎಂಟು ಗೇಟ್‌ಗಳನ್ನು ತೆರೆದು 40,331 ಕ್ಯುಸೆಕ್ಸ್ ನೀರನ್ನು ಹೊರಬಿಡಲಾಗಿದೆ.

ಬೊಮ್ಮನಹಳ್ಳಿ ಜಲಾಶಯದ ಎರಡು ಗೇಟ್ ತೆರೆದು 9156 ಕ್ಯುಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಜಲಾನಯ ಪ್ರದೇಶದಲ್ಲಿ ಇದೇ ರೀತಿ ಸತತ ಮಳೆಯಾದಲ್ಲಿ, ಇನ್ನೂ ಹೆಚ್ಚಿನ ನೀರನ್ನು ಜಲಾಶಯದಿಂದ ಹೊರಬಿಡುವ ಸಾಧ್ಯತೆಯಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭಟ್ಕಳ ಹಾಗೂ ಹೊನ್ನಾವರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದಾರೆ.

RELATED TOPICS:
English summary :Heavy rains in many parts of Uttara Kannada since Saturday morning: People lives disrupted

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...