Sat,Apr27,2024
ಕನ್ನಡ / English

ಉತ್ತರಕನ್ನಡ; ಮುಂದುವರೆದ ಮಳೆ 14 ಕಾಳಜಿ ಕೇಂದ್ರ ಸ್ಥಾಪನೆ | JANATA NEWS

17 Jul 2022
1902

ಕಾರವಾರ : ಉತ್ತರಕನ್ನಡ ಜಿಲ್ಲೆಯಾದ್ಯಂತ ಶನಿವಾರ ಸಂಜೆವರೆಗೂ ಸಹ ಧಾರಾಕಾರ ಮಳೆಯಾಗುತ್ತಿದೆ. ಕುಮಟಾ ಹಾಗೂ ಹೊನ್ನಾವರ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ವ್ಯಾಪಕ ಹಾನಿ ಸಂಭವಿಸಿದೆ.

ಕಳೆದ ೨೪ ಗಂಟೆಗಳಲ್ಲಿ ಜಿಲ್ಲೆಯಲ್ಲಿ ೪೭ ಮನೆಗಳು ಭಾಗಶಃ, ೬ ಮನೆಗಳು ಸಂಪೂರ್ಣ ಹಾನಿಯಾಗಿದೆ. ನೆರೆಗೆ ಸಿದ್ದಾಪುರದಲ್ಲಿ ಒಂದು ಸಾವು ಸಂಭವಿಸಿದೆ. ಸತತ ಮಳೆಗೆ ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ಇಂದು ಒಟ್ಟು ೧೪ ಕಾಳಜಿ ಕೇಂದ್ರಗಳನ್ನು ತೆರೆಯಾಗಿದೆ. ೧೬೨ ಕುಟುಂಬಗಳ ೩೩೪ ಸದಸ್ಯರು ಈ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೆಂದ್ರ ಮಾಹಿತಿ ನೀಡಿದೆ.

ಹೊನ್ನಾವರದ ಗುಂಡಬಾಳ ನದಿಗೆ ಪ್ರವಾಹ ಬಂದಿದ್ದು, ಹತ್ತಿರದ ಗ್ರಾಮಗಳು ಜಲಾವೃತವಾಗಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಹೊನ್ನಾವರ ಬಳಿ ಗೇರುಸೊಪ್ಪ ಸಮೀಪದ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-೬೯ ರಲ್ಲಿ ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಕೆಳಭಾಗದ ಗುಡ್ಡ ಕುಸಿದ್ದರಿಂದ ಅರ್ಧದಷ್ಟು ರಸ್ತೆಯೂ ಕುಸಿತವಾಗಿದೆ. ಇದರಿಂದಾಗಿ ಹೊನ್ನಾವರದಿಂದ ಗೇರುಸೊಪ್ಪ ಮಾರ್ಗವಾಗಿ ಸಿದ್ದಾಪುರ, ತಾಳಗುಪ್ಪಕ್ಕೆ ಸಂಚರಿಸುವ ಮಾರ್ಗ ಕಡಿತವಾಗಿದೆ.

ಗೇರುಸೊಪ್ಪ ಗ್ರಾಮದಿಂದ ಸಿದ್ದಾಪುರ ತಾಲ್ಲೂಕಿನ ಮಾವಿನಗುಂಡಿ ಗ್ರಾಮದವರೆಗೆ ರಸ್ತೆ ಸಂಚಾರವನ್ನು ನಿಷೇಧಿಸಲಾಗಿದೆ. ಹೊನ್ನಾವರದಿಂದ ಸಿದ್ದಾಪುರ, ಜೋಗ, ಸಾಗರ ಕಡೆಗೆ ಹೋಗುವ ವಾಹನಗಳು ಕುಮಟಾ- ಸಂತೆಗುಳಿ ಮಾರ್ಗವಾಗಿ ಸಿದ್ದಾಪುರಕ್ಕೆ ತೆರಳಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

RELATED TOPICS:
English summary : Uttara Kannada; Continued rain 14 Care center set up

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...