Mon,May20,2024
ಕನ್ನಡ / English

ಉತ್ತರಕನ್ನಡ : ಮಳೆ ಹಾನಿಗೆ ಹೆಚ್ಚಿನ ಪರಿಹಾರ ಬಿಡುಗಡೆಗೆ ದೇಶಪಾಂಡೆ ಒತ್ತಾಯ | JANATA NEWS

20 Jul 2022
3155

ಕಾರವಾರ : ಇತ್ತೀಚೆಗೆ ಸುರಿದ ಭಾರಿ ಮಳೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾರ್ವಜನಿಕ ಮತ್ತು ಸರಕಾರಿ ಆಸ್ತಿ-ಪಾಸ್ತಿಗೆ ಸಾಕಷ್ಟು ಹಾನಿಯಾಗಿದ್ದು, ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವಂತೆ ಶಾಸಕ ಆರ್.ವಿ.ದೇಶಪಾಂಡೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಮಳೆ ಮತ್ತು ನೆರೆಗೆ ವಿವಿಧ ಕಡೆಗಳಲ್ಲಿ ಗುಡ್ಡಗಳು ಕುಸಿತವಾಗಿ, ಅಲ್ಲಲ್ಲಿ ಜನಸಂಪರ್ಕವು ಕೂಡ ಕಡಿತಗೊಂಡಿದೆ. ಸಾಕಷ್ಟು ಪ್ರಮಾಣದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳು ಭಾಗಶಃ ಹಾಳಾಗಿದ್ದು, ಅವರ ಪುನರ್ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ನದಿ ತಟಗಳ ಪ್ರದೇಶದಲ್ಲಿ ವಾಸಿಸುವ ಮನೆಗಳಿಗೆ ನೀರು ನುಗ್ಗಿದ್ದು, ಹಲವಾರು ಮನೆಗಳು ಜಲಾವೃತವಾಗಿದ್ದವು. ಕೆಲವೆಡೆ ಮನೆಗಳು ಕುಸಿದಿದ್ದು, ಜೀವನಾವಶ್ಯಕ ಸಾಮಗ್ರಿಗಳು ನೀರು ಪಾಲಾಗಿರುತ್ತವೆ.

ಅಲ್ಲದೇ, ನದಿಗಳ ಅಕ್ಕ-ಪಕ್ಕದಲ್ಲಿರುವ ಜಮೀನುಗಳಿಗೆ ನೀರು ಹರಿದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ರೈತರ ಕೃಷಿ ಉಪಕರಣಗಳು, ಪಂಪಸೆಟ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುತ್ತವೆ.

ರೈತರಿಗೆ ಹಾಗೂ ನಿರಾಶ್ರಿತರಿಗೆ ಹೆಚ್ಚಿನ ಪರಿಹಾರ ನೀಡಿ, ರೈತರ ನೆರವಿಗೆ ಸರ್ಕಾರ ಧಾವಿಸಬೇಕಾಗಿದೆ. ಮೂಲಸೌಕರ್ಯಗಳ ದುರಸ್ತಿ ಮತ್ತು ಮರುಸ್ಥಾಪನೆಗಾಗಿ ಮುಖ್ಯಮಂತ್ರಿಗಳು ೫೦೦ ಕೋಟಿಗಳನ್ನು ಮಂಜೂರು ಮಾಡಿದ್ದಾರೆ. ಆದರೆ ಈಗ ಮಂಜೂರು ಮಾಡಿರುವ ೫೦೦ ಕೋಟಿ ಮೊತ್ತ ಸಾಕಾಗುವುದಿಲ್ಲ. ಕಾರಣ, ಹೆಚ್ಚಿನ ಅನುದಾನ ಶೀಘ್ರವಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ, ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇಂದು ಸಹ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ.

ಭಾರಿ ಮಳೆ ಹಾಗೂ ನೆರೆಗೆ ಜಿಲ್ಲೆಯಲ್ಲಿ ೫೬.೫೭ ಹೆಕ್ಟೆರ್ ಪ್ರದೇಶದ ಕೃಷಿ ಬೆಳೆ ಹಾನಿ ಹಾಗೂ ೧೪.೭೮ ಹೆಕ್ಟೆರ್ ತೋಟಗಾರಿಕಾ ಬೆಳೆ ಹಾನಿಯಾಗಿದೆ. ೨೪ ಮನೆಗಳಿಗೆ ಸಂಪೂರ್ಣ ಹಾನಿ, ೯೪ ಮನೆಗಳು ತೀವ್ರ ಹಾಗೂ ೫೦೨ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಳಿಯಾಳದಲ್ಲಿ ಮೂರು, ಹೊನ್ನಾವರ ಹಾಗೂ ಸಿದ್ದಾಪುರದಲ್ಲಿ ತಲಾ ಒಂದು ಸೇರಿದಂತೆ ಒಟ್ಟು ೫ ಜೀವ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.

ಉತ್ತರಕನ್ನಡದಲ್ಲಿ ತಗ್ಗಿದ ಮಳೆ

RELATED TOPICS:
English summary : Uttara Kannada: Deshpande insists on releasing more compensation for rain damage

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...