Fri,Aug12,2022
ಕನ್ನಡ / English

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ ಇದ್ದಾರೆ: ನವ್ಯಶ್ರೀ | JANATA NEWS

23 Jul 2022
508

ಬೆಳಗಾವಿ : ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಇದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ನವ್ಯಶ್ರೀ ರಾಸಲೀಲೆ ವಿಡಿಯೋ ಹರಿಬಿಟ್ಟರುವುದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ, ನವ್ಯಶ್ರೀ ಆ ಮಹಾನಾಯಕನ ಹೆಸರು ಹೇಳಿಲ್ಲ.ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇದೆಲ್ಲದರ ಹಿಂದೆ ಇರುವವರು ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ. ಅವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ತವಕದಲ್ಲಿದ್ದಾರೆ. ಅವರ ಜತೆ ಪತ್ರಿಕಾ ಸಂಪಾದಕರೊಬ್ಬರಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ತನಿಖೆ ಬಳಿಕ ಎಲ್ಲರ ಮುಖವಾಡ ಕಳಚಲಿದೆ ಎಂದು ಹೇಳಿದರು.

ಆ ಸಂದರ್ಭದಲ್ಲಿ ನಾನು ವಿದೇಶದಲ್ಲಿದ್ದೆ. ವಾಪಸ್ ಭಾರತಕ್ಕೆ ಬಂದಾಗ ಈ ಬಗ್ಗೆ ಗೊತ್ತಾಯಿತು. ಪರಿಶೀಲನೆ ನಡೆಸಿ ದೂರು ಕೊಡಬೇಕು ಎನ್ನುವಷ್ಟರಲ್ಲಿ ರಾಜಕುಮಾರ ಟಾಕಳೆ ರಾತ್ರೋರಾತ್ರಿ ಬೆಳಗಾವಿ ಎಪಿಎಂಸಿ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ನನ್ನ ವಿರುದ್ಧ ಹನಿಟ್ರ್ಯಾಪ್ ಆರೋಪ ಮಾಡಿದ್ದಾರೆ ಎಂದರು.

ರಾಜಕುಮಾರ್ ಟಾಕಳೆ ಹಾಗೂ ನಾನು 2020 ಮೇ ತಿಂಗಳಲ್ಲಿ ಬೆಂಗಳೂರಿನ ಕುಮಾರ ಕೃಪಾ ಪ್ರವಾಸಿ ಮಂದಿರದ ಹಿಂದಿರುವ ಗಣೇಶ ದೇವಸ್ಥಾನದಲ್ಲಿ ವಿವಾಹವಾಗಿದ್ದೆವೆ. ರಾಜಕುಮಾರ್ ಟಾಕಳೆ ನನ್ನ ಗಂಡ. ಆತನಿಂದ ನನಗೆ ಅನ್ಯಾಯವಾಗಿದೆ. ಈ ಹಿಂದೆ ನಾನು ಎರಡು‌ ಬಾರಿ ಬೆಳಗಾವಿ ‌ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ.

ಮೊದಲ ಪತ್ನಿ ಇದ್ದರೂ ರಾಜಕುಮಾರ್ ಟಾಕಳೆ ನನ್ನನ್ನು ಕಿಡ್ನಾಪ್ ಮಾಡಿ ಮದುವೆಯಾಗಿದ್ದ. ಅಶ್ಲೀಲ ವಿಡಿಯೋ ಚಿತ್ರಿಕರಣ ಮಾಡಿ ವೆಬ್ ಸೈಟ್ ಗೆ ಮಾರಾಟ ಮಾಡಿದ್ದಾನೆ. ಸಾರ್ವಜನಿಕ ಜೀವನದಲ್ಲಿ ನನ್ನ ಮಾನ ತಗೆದಿದ್ದಾನೆ. ಆತನ ವಿರುದ್ಧ ಈಗಾಗಲೇ ನಾನು ದೂರು ದಾಖಲಿಸಿದ್ದೇನೆ. ಕಮಿಷ್ನರ್ ಭೇಟಿಯಾಗಿ ನನಗೆ ನ್ಯಾಯ ಒದಗಿಸುವಂತೆ ಕೇಳಿದ್ದೇನೆ ಎಂದು ಹೇಳಿದರು.

RELATED TOPICS:
English summary :Behind the conspiracy against me is a Congress leader from Chennapatnam: Navyashree

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...