ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಪೊಲೀಸರು | JANATA NEWS

ಬೆಂಗಳೂರು : ವಾಸವಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರನೊಬ್ಬನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕಿತ ಉಗ್ರ ಅಖ್ತರ್ ಹುಸೇನ್ ನೀಡದ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ.
ಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ವಾಸವಿದ್ದ ಅಖ್ತರ್ ಹುಸೇನ್ ಲಷ್ಕರ್ ಶಂಕಿತ ಉಗ್ರ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಆಘಿ ಕೆಲಸ ಮಾಡುತ್ತ ಯುವಕರೊಂದಿಗೆ ವಾಸವಿದ್ದ ಎನ್ನಲಾಗಿದೆ.
ರೂಮ್ನಲ್ಲಿದ್ದ ಇತರ ಮೂವರು ಯುವಕರು ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ನಾಲ್ವರೂ ಸಹ ರಾತ್ರಿ ವೇಳೆ ಮಾತ್ರ ಓಡಾಟ ನಡೆಸುತ್ತಿದ್ದು, ಸ್ಥಳೀಯರೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ಸದ್ಯ ಶಂಕಿತ ಉಗ್ರನನ್ನು 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಎನ್ಆಯ್ಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಶಂಕಿತ ಉಗ್ರ ಅಖ್ತರ್ ಆಗಸ್ಟ್ 3ರವರೆಗೆ ಸಿಸಿಬಿ ಕಸ್ಟಡಿಯಲ್ಲಿರಲಿದ್ದಾನೆ. ಶಂಕಿತ ಉಗ್ರನ ಮೊಬೈಲ್ ರಿಟ್ರೀವ್ಗೆ ಕೊರ್ಟ್ ಅನುಮತಿ ನೀಡಿದೆ.